ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ ಒಟ್ಟು 31 ಬಾಂಗ್ಲಾದೇಶಿ ಪ್ರಜೆಗಳನ್ನು (Bangladeshi Nationals) ಪೊಲೀಸರು ಗಡಿಪಾರು ಮಾಡಿದ್ದಾರೆ.
ನಗರದ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಈ 31 ಮಂದಿಯನ್ನು ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಪೊಲೀಸ್ ಭದ್ರತೆಯಲ್ಲಿ (Police security) ಗಡಿಪಾರು ಮಾಡಲಾಗಿದೆ.

20 ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಗಡಿಪಾರು
ಬಂಧಿತ ಬಾಂಗ್ಲಾ ಪ್ರಜೆಗಳನ್ನು ಸುಮಾರು 20 ಪೊಲೀಸ್ ಸಿಬ್ಬಂದಿಗಳ ಭದ್ರತೆಯೊಂದಿಗೆ ಬೆಂಗಳೂರಿನ ರೈಲ್ವೇ ಟರ್ಮಿನಲ್‌ಗೆ ಕರೆದೊಯ್ಯಲಾಯಿತು. ಅಲ್ಲಿಂದ ರೈಲಿನ ಮೂಲಕ ಪಶ್ಚಿಮ ಬಂಗಾಳದ ಗಡಿ (West Bengal Border) ಭಾಗಕ್ಕೆ ಕರೆದೊಯ್ದ ಪೊಲೀಸರು, ಬಳಿಕ ಅಲ್ಲಿಂದ ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿದ್ದಾರೆ.
10 ಠಾಣೆಗಳ ವ್ಯಾಪ್ತಿಯಲ್ಲಿ ಬಂಧನ
ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈ 31 ಮಂದಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಇವರ ದಾಖಲೆಗಳು ಹಾಗೂ ಭಾರತದಲ್ಲಿ ವಾಸ್ತವ್ಯಕ್ಕೆ ಸಂಬಂಧಿಸಿದ ವಿಚಾರಗಳ ಪರಿಶೀಲನೆ ಬಳಿಕ ಗಡಿಪಾರು ಪ್ರಕ್ರಿಯೆ ಕೈಗೊಳ್ಳಲಾಗಿದೆ.

ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆದೊಯ್ಯಲಾದ 31 ಮಂದಿಯನ್ನ ಪಶ್ಚಿಮ ಬಂಗಾಳದ ಗಡಿ ಭಾಗದಿಂದ ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
