ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 314 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ. 2 ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದ್ದು, ಉಳಿದ 29 ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಬಾಗಲಕೋಟೆ, ಬೀದರ್ ಸೇರಿ ಒಟ್ಟು 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
Advertisement
ರಾಜ್ಯದಲ್ಲಿ 339 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,305 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,99,785 ಮಂದಿಗೆ ಕೊರೊನಾ ಬಂದಿದೆ. 29,54,196 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.63 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.26 ರಷ್ಟಿದೆ. ಇಂದು ಬೆಂಗಳೂರು ನಗರದಲ್ಲಿ 179 ಮಂದಿಗೆ ಕೊರೊನಾ ಬಂದಿದ್ದು, 204 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದನ್ನೂ ಓದಿ: ಮಹಿಳಾ ಟೆಕ್ಕಿ ಆತ್ಮಹತ್ಯೆ – ಗಂಡನ ಕಿರುಕುಳ ಅರೋಪ
Advertisement
Advertisement
ರಾಜ್ಯದಲ್ಲಿ ಇಂದು ಒಟ್ಟು 3,51,606 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,19,766 ಸ್ಯಾಂಪಲ್ (ಆರ್ಟಿಪಿಸಿಆರ್ 1,03,310 + 17,456 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತನ ಪತ್ನಿ, ಬಾಮೈದುನನಿಗೂ ಸೋಂಕು- ಗುಜರಾತ್ನಲ್ಲಿ 3ಕ್ಕೇರಿದ ಸಂಖ್ಯೆ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 8, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 179, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 19, ಚಿತ್ರದುರ್ಗ 1, ದಕ್ಷಿಣ ಕನ್ನಡ 26, ದಾವಣಗೆರೆ 0, ಧಾರವಾಡ 5, ಗದಗ 0, ಹಾಸನ 4, ಹಾವೇರಿ 0, ಕಲಬುರಗಿ 1, ಕೊಡಗು 26, ಕೋಲಾರ 1, ಕೊಪ್ಪಳ 0, ಮಂಡ್ಯ 6, ಮೈಸೂರು 15, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 4, ಉಡುಪಿ 4, ಉತ್ತರ ಕನ್ನಡ 6, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.