ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 315 ಹೊಸ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. 2 ಮರಣ ಪ್ರಕರಣ ದಾಖಲಾಗಿದೆ. ಈ ಎರಡು ಮರಣ ಪ್ರಕರಣ ಬೆಂಗಳೂರು ನಗರದಲ್ಲಿ ದಾಖಲಾಗಿದೆ.
Advertisement
ರಾಜ್ಯದಲ್ಲಿ 236 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,831 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,95,600 ಮಂದಿಗೆ ಕೊರೊನಾ ಬಂದಿದೆ. 29,50,542 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.63 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.40 ರಷ್ಟಿದೆ. ಇದನ್ನೂ ಓದಿ: ಓಮಿಕ್ರೋನ್ ಭೀತಿ – ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಪ್ರಕಟ
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 1,83,255 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 77,818 ಸ್ಯಾಂಪಲ್ (ಆರ್ಟಿಪಿಸಿಆರ್ 64,651 + 13,167 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಒಮಿಕ್ರಾನ್ ಆತಂಕ – ಸೋಂಕಿತ ರಾಷ್ಟ್ರಗಳಿಂದ ಬರೋರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 152, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 0, ಚಿತ್ರದುರ್ಗ 1, ದಕ್ಷಿಣ ಕನ್ನಡ 19, ದಾವಣಗೆರೆ 2, ಧಾರವಾಡ 49, ಗದಗ 0, ಹಾಸನ 9, ಹಾವೇರಿ 0, ಕಲಬುರಗಿ 2, ಕೊಡಗು 8, ಕೋಲಾರ 0, ಕೊಪ್ಪಳ 0, ಮಂಡ್ಯ 1, ಮೈಸೂರು 26, ರಾಯಚೂರು 0, ರಾಮನಗರ 0, ಶಿವಮೊಗ್ಗ 10, ತುಮಕೂರು 11, ಉಡುಪಿ 10, ಉತ್ತರ ಕನ್ನಡ 8, ವಿಜಯಪುರ ಮತ್ತು ಯಾದಗಿರಿಯಲ್ಲಿ ಇಂದು ಕೂಡ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.