ಇಂದು 317 ಪಾಸಿಟಿವ್ – ಬೆಂಗಳೂರಿನಲ್ಲಿ 205 ಕೇಸ್, 4 ಲಕ್ಷ ಮಂದಿಗೆ ಲಸಿಕೆ

Advertisements

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 317 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 7 ಮರಣ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 205 ಕೇಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ದಾಖಲಾದ ಎರಡು ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದೆ. ಇಂದು 4,17,879 ಮಂದಿಗೆ ಲಸಿಕೆ ನೀಡಲಾಗಿದೆ.

Advertisements

ರಾಜ್ಯದಲ್ಲಿ 301 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,179 ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 30,01,251 ಮಂದಿಗೆ ಕೊರೊನಾ ಬಂದಿದೆ. 29,55,766 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.63 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.26 ರಷ್ಟಿದೆ. ಇದನ್ನೂ ಓದಿ: ಪ.ಬಂಗಾಳದಲ್ಲಿ 7 ವರ್ಷದ ಬಾಲಕನಿಗೆ ಓಮಿಕ್ರಾನ್‌ ಸೋಂಕು- ತೆಲಂಗಾಣದಲ್ಲೂ 2 ಪ್ರಕರಣ ದೃಢ

Advertisements

ರಾಜ್ಯದಲ್ಲಿ ಇಂದು ಒಟ್ಟು 4,17,879 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,19,845 ಸ್ಯಾಂಪಲ್ (ಆರ್‌ಟಿಪಿಸಿಆರ್ 1,00,999 + 18,846 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಟೆನ್ಶನ್ ನಡುವೆ ಕರುನಾಡಿಗೆ ರಿಲೀಫ್- ಸೋಂಕಿತ ಆಸ್ಪತ್ರೆಯಿಂದ ಡಿಸ್ಚಾರ್ಜ್

Advertisements

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 205, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 3, ದಕ್ಷಿಣ ಕನ್ನಡ 16, ದಾವಣಗೆರೆ 1, ಧಾರವಾಡ 1, ಗದಗ 0, ಹಾಸನ 21, ಹಾವೇರಿ 0, ಕಲಬುರಗಿ 0, ಕೊಡಗು 20, ಕೋಲಾರ 1, ಕೊಪ್ಪಳ 0, ಮಂಡ್ಯ 3, ಮೈಸೂರು 8, ರಾಯಚೂರು 0, ರಾಮನಗರ 1, ಶಿವಮೊಗ್ಗ 3, ತುಮಕೂರು 6, ಉಡುಪಿ 1, ಉತ್ತರ ಕನ್ನಡ 7, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Advertisements
Exit mobile version