32 ಕೋಟಿ ರೂಪಾಯಿ ತೆರಿಗೆ ಪಾವತಿಸದ ಮಂತ್ರಿ ಮಾಲ್‍ಗೆ ಬೀಗ ಜಡಿದ ಬಿಬಿಎಂಪಿ

Public TV
1 Min Read
manthri mall 5

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಬರೋಬ್ಬರಿ 32 ಕೋಟಿ ರೂಪಾಯಿ ತೆರಿಗೆ ಪಾವತಿದೇ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್‍ಗೆ ಬಿಬಿಎಂಪಿ ಬೀಗ ಜಡಿದಿದೆ.

manthri mall 7

ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಕಂದಾಯಾಧಿಕಾರಿ ಪ್ರಸನ್ನ ಕುಮಾರ್, ಕಳೆದ ಮೂರು ವರ್ಷಗಳಿಂದ ತೆರಿಗೆ ಕಟ್ಟದೆ 32 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಹಿಂದೆ ತೆರಿಗೆ ಪಾವತಿಸುವಂತೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿತ್ತು. ಆದರೂ ಎಚ್ಚೆತ್ತುಕೊಳ್ಳದ ಮಾಲ್ ಮಾಲೀಕರ ವಿರುದ್ಧ ಕಾನೂನು ಕ್ರಮವಾಗಿ ನಿನ್ನೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್‍ಗೆ ಬೀಗ ಹಾಕಿದ್ದೇವೆ ಎಂದರು.

manthri mall 6

ಈ ಹಿಂದೆ ಮಾಲ್ ಮಾಲೀಕರು 10 ಕೋಟಿ ಚೆಕ್ ನೀಡಿದ್ದರು. ಆದರೆ ಅದು ಬೌನ್ಸ್ ಆಗಿರುವುದರಿಂದಾಗಿ ಪಾಲಿಕೆ ಕಾನೂನು ಕೋಶದ ಶಿಫಾರಸ್ಸಿನ ಮೇರೆಗೆ ಬೀಗ ಹಾಕಿ ಮಾ. 1ವರೆಗೆ ತೆರಿಗೆ ಪಾವತಿ ಮಾಡಲು ಕಾಲವಕಾಶ ನೀಡಿದೆ.

manthri mall 8

ಮಂತ್ರಿ ಮಾಲ್ ಮಾಲೀಕರು ಆಸ್ತಿ ತೆರಿಗೆ ಪಾವತಿಗಾಗಿ 15 ದಿನ ಕಾಲವಕಾಶ ಕೇಳಿದ್ದರು. ಅದರಂತೆ ನೋಟಿಸ್ ನೀಡಿ 15 ದಿನಗಳು ಕಳೆದ ಕಾರಣ ಪಶ್ಚಿಮ ವಿಭಾಗದ ತೆರಿಗೆ ಅಧಿಕಾರಿಗಳು ಮಾಲ್ ಸಿಬ್ಬಂದಿಯನ್ನ ಹೊರಗೆ ಕರೆದು ಬೀಗ ಹಾಕಿದ್ದು, ಮಾರ್ಚ್ 1 ವರೆಗೆ ಅವಕಾಶವಿದ್ದು ಕಟ್ಟದೇ ಹೋದರೆ ಬಿಬಿಎಂಪಿ ಮಾಲ್‍ನ್ನು ವಶಪಡಿಸಿಕೊಳ್ಳುವುದಾಗಿ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *