ಢಾಕಾ: ಬಾಂಗ್ಲಾದೇಶದ ನದಿಯೊಂದರಲ್ಲಿ ಪ್ರಯಾಣಿಕರು ಮತ್ತು ಸರಕುಗಳನ್ನು ಸಾಗಿಸುತ್ತಿದ್ದ ಹಡಗಿಗೆ ಬೆಂಕಿಹೊತ್ತಿಕೊಂಡ ಪರಿಣಾಮ ಸುಮಾರು 32 ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ರಾಜಧಾನಿ ಢಾಕಾದಿಂದ 250 ಕಿಲೋಮೀಟರ್ ದೂರವಿರುವ ದಕ್ಷಿಣ ಗ್ರಾಮ ಪಟ್ಟಣವಾದ ಜಲೋಕತಿ ಬಳಿ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಹಡಗಿನಲ್ಲಿ ಸುಮಾರು 500 ಜನ ಪ್ರಯಾಣಿಕರು ಇದ್ದರು. ಇದನ್ನೂ ಓದಿ: ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್
Advertisement
Advertisement
ಮೂರು ಮಹಡಿಯ ಹಡಗಿನಲ್ಲಿ ನದಿಯ ಮಧ್ಯಭಾಗದಲ್ಲಿ ಇದ್ದಾಗ ಬೆಂಕಿ ಹೊತ್ತಿಕೊಂಡಿತು. ಘಟನೆಯ ಬಳಿಕ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಈವರೆಗೆ 32 ಜನರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೆಚ್ಚಿನವರು ಬೆಂಕಿಯಿಂದ ಗಂಭೀರ ಸುಟ್ಟಗಾಯಗಳಾಗಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Advertisement
ಬೆಂಕಿಯಿಂದ ಸುಟ್ಟ ಗಾಯಗಳಾಗಿರುವುದರಿಂದ 100 ಮಂದಿಯನ್ನು ಪಕ್ಕದಲ್ಲಿರುವ ಬರಿಸಲಾನ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ಹಿನ್ನೆಲೆ ಕೊಡಗಿನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ