ಅಸ್ತಾನ(ಕಜಕಿಸ್ತಾನ್): ಕಲ್ಲಿದ್ದಲು ಗಣಿಯಲ್ಲಿ (Coal Mine) ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident )ಕನಿಷ್ಠ 32 ಜನರು ಸಾವನ್ನಪ್ಪಿದ್ದು, 14 ಮಂದಿ ನಾಪತ್ತೆಯಾದ ಘಟನೆ ಕಜಕಿಸ್ತಾನದಲ್ಲಿ (Kazakhstan) ನಡೆದಿದೆ.
ಲಕ್ಸೆಂಬರ್ಗ್ ಮೂಲದ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಕಂಪನಿಯ ಕಲ್ಲಿದ್ದಲು ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಗಣಿಯಲ್ಲಿ 252 ಜನ ಕೆಲಸ ಮಾಡುತ್ತಿದ್ದರು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ 206 ಜನರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಮೀಥೇನ್ ಅನಿಲ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ. ಈ ದುರಂತ ಬಹಳ ದುರಾದೃಷ್ಟಕರವಾದದ್ದು ಎಂದು ಕಜಕಿಸ್ತಾನದ ಅಧ್ಯಕ್ಷ ಕಾಸಿಮ್-ಜೋಮಾರ್ಟ್ ಟೊಕಾಯೆವ್ ಹೇಳಿದ್ದಾರೆ. ಇದನ್ನೂ ಓದಿ: ಅಪ್ಪು ಅಗಲಿ ಇಂದಿಗೆ 2 ವರ್ಷ- ಪುನೀತ್ ಸಮಾಧಿಗೆ ದೊಡ್ಮನೆ ಕುಟುಂಬಸ್ಥರಿಂದ ಪೂಜೆ
Advertisement
Advertisement
ದುರಂತದ ಬಳಿಕ, ಮಿತ್ತಲ್ ಸಂಸ್ಥೆಯೊಂದಿಗಿನ ಸರ್ಕಾರದ ಹೂಡಿಕೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ. ಅಲ್ಲದೇ ಕಂಪನಿಯ ಘಟಕಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Advertisement
Advertisement
ಕಳೆದ ಆಗಸ್ಟ್‌ನಲ್ಲೂ ಅಗ್ನಿ ಅವಘಡ ಸಂಭವಿಸಿ 9 ಜನ ಸಾವನ್ನಪ್ಪಿದ್ದರು. ಈ ವೇಳೆ ಪರಿಸರ ನಿಯಮಗಳ ಉಲ್ಲಂಘನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಲಕ್ಸೆಂಬರ್ಗ್ ಮೂಲದ ಬಹುರಾಷ್ಟ್ರೀಯ ಕಂಪನಿಯಾಗಿದ್ದು, ಇದು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕನ್ನು ಉತ್ಪಾದಿಸುತ್ತದೆ. ಇದನ್ನೂ ಓದಿ: ಅಮೆರಿಕದಲ್ಲಿ ಗುಂಡಿನ ದಾಳಿ ನಡೆಸಿದ್ದ ಶೂಟರ್ 2 ದಿನಗಳ ಬಳಿಕ ಶವವಾಗಿ ಪತ್ತೆ
Web Stories