ಕಾರವಾರ: ಡೆಂಗ್ಯೂವಿನಿಂದ (Dengue) ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉತ್ತರ ಕನ್ನಡದ (Uttara Kannada) ಅಂಕೋಲದಲ್ಲಿ ನಡೆದಿದೆ.
ಮೃತರನ್ನು ಬಾವಿಕೇರಿಯ ನಿವಾಸಿ ಹರೇ ರಾಮ್ ಗೋಪಾಲ್ ಭಟ್ (32) ಎಂದು ಗುರುತಿಸಲಾಗಿದೆ. ಅವರು ಕಳೆದ ಒಂದು ವಾರದಿಂದ ಡೆಂಗ್ಯೂವಿನಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಡೆಂಗ್ಯೂಗೆ ಆರೋಗ್ಯಾಧಿಕಾರಿ ನಿಧನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂವಿಗೆ ಈ ಬಾರಿ ಇದು ಮೊದಲ ಬಲಿಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 119 ಜನರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ 6,676 ಮಂದಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ಇಂದು ರಾಜ್ಯದಲ್ಲಿ 286 ಮಂದಿಗೆ ಡೆಂಗ್ಯೂ ಇರುವುದು ವರದಿಯಾಗಿದೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವನ್ನು ಬಿಟ್ಟು ಹೋದ ಮಹಿಳೆ