ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಆದರೆ ಧಾರವಾಡ ಜಿಲ್ಲೆಯಲ್ಲಿ ಇಂದು 76 ಪಾಸಿಟವ್ ಪ್ರಕರಣಗಳು ದಾಖಲಾಗುವ ಮೂಲಕ ಕೊರೊನಾ ಸ್ಪೋಟಗೊಂಡಿದೆ. ಇಂದು ರಾಜ್ಯದಲ್ಲಿ ಒಟ್ಟು 322 ಪಾಸಿಟಿವ್ ಕೇಸ್ ಪತ್ತೆಯಾಗಿದೆ. 3 ಮರಣ ಪ್ರಕರಣ ದಾಖಲಾಗಿದೆ.
Advertisement
ರಾಜ್ಯದಲ್ಲಿ 176 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,754 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,95,285 ಮಂದಿಗೆ ಕೊರೊನಾ ಬಂದಿದೆ. 29,50,306 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.93 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.34 ರಷ್ಟಿದೆ. ಇಂದು ಬೆಂಗಳೂರು ನಗರದಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾದರೆ, ಚಿತ್ರದುರ್ಗ, ಧಾರವಾಡ ಮತ್ತು ತುಮಕೂರಿನಲ್ಲಿ ತಲಾ ಒಂದೊಂದು ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಕ್ಷಿಣ ಅಫ್ರಿಕಾದಿಂದ ಬಂದವರಲ್ಲಿ ಇಬ್ಬರಿಗೆ ಸೋಂಕು- ಬೆಂಗಳೂರು ಏರ್ಪೋರ್ಟ್ನಲ್ಲಿ ಹೈ ಅಲರ್ಟ್
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 3,48,137 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 94,651 ಸ್ಯಾಂಪಲ್ (ಆರ್ಟಿಪಿಸಿಆರ್ 79,714 + 14,937 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಲಸಿಕೆ ಪಡೆದವರಲ್ಲಿಯೂ ಒಮಿಕ್ರಾನ್ ಹೊಸ ತಳಿ ಪತ್ತೆ – ಆತಂಕ ಯಾಕೆ?
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 149, ಬೀದರ್ 2, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 5, ದಕ್ಷಿಣ ಕನ್ನಡ 13, ದಾವಣಗೆರೆ 0, ಧಾರವಾಡ 76, ಗದಗ 2, ಹಾಸನ 7, ಹಾವೇರಿ 0, ಕಲಬುರಗಿ 0, ಕೊಡಗು 3, ಕೋಲಾರ 1, ಕೊಪ್ಪಳ 2, ಮಂಡ್ಯ 1, ಮೈಸೂರು 27, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 7, ಉಡುಪಿ 5, ಉತ್ತರ ಕನ್ನಡ 4, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.