ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 322 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಅತೀ ಹೆಚ್ಚು 165 ಪಾಸಿಟಿವ್ ಕೇಸ್ ವರದಿಯಾಗಿದೆ.
Advertisement
ರಾಜ್ಯದಲ್ಲಿ 162 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,574 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,96,470 ಮಂದಿಗೆ ಕೊರೊನಾ ಬಂದಿದೆ. 29,51,654 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.62 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.31 ರಷ್ಟಿದೆ. ಇಂದು ಬೆಂಗಳೂರು ನಗರ ಮತ್ತು ಬೆಳಗಾವಿಯಲ್ಲಿ ತಲಾ ಒಂದೊಂದು ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಭಾರತದ ಅಂತರರಾಷ್ಟ್ರೀಯ ವಿಮಾನ ಪುನರಾರಂಭ ಮುಂದೂಡಿಕೆ
Advertisement
ರಾಜ್ಯದಲ್ಲಿ ಇಂದು ಒಟ್ಟು 7,32,206 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,01,778 ಸ್ಯಾಂಪಲ್ (ಆರ್ಟಿ ಪಿಸಿಆರ್ 84,262 + 17,516 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: 9ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ದೃಢ – ಶಾಲೆಗೆ ರಜೆ
Advertisement
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 165, ಬೀದರ್ 0, ಚಾಮರಾಜನಗರ 9, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 4, ದಕ್ಷಿಣ ಕನ್ನಡ 13, ದಾವಣಗೆರೆ 0, ಧಾರವಾಡ 10, ಗದಗ 1, ಹಾಸನ 13, ಹಾವೇರಿ 0, ಕಲಬುರಗಿ 1, ಕೊಡಗು 9, ಕೋಲಾರ 2, ಕೊಪ್ಪಳ 0, ಮಂಡ್ಯ 6, ಮೈಸೂರು 47, ರಾಯಚೂರು 1, ರಾಮನಗರ 1, ಶಿವಮೊಗ್ಗ 13, ತುಮಕೂರು 6, ಉಡುಪಿ 10, ಉತ್ತರ ಕನ್ನಡ 3, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.