ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 328 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಕೆಲದಿನಗಳಿಂದ ಇಳಿಕೆ ಕಂಡಿದ್ದ ಕೊರೊನಾ ಕೇಸ್ ಮತ್ತೆ ಮೂನ್ನೂರರ ಗಡಿದಾಟಿದೆ. 9 ಮಂದಿ ಸಾವನ್ನಪ್ಪಿದ್ದು, ಬೆಂಗಳೂರು ನಗರದಲ್ಲಿ 176 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 102 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 5 ಮರಣ ಪ್ರಕರಣ ದಾಖಲಾಗಿದೆ.
Advertisement
ರಾಜ್ಯದಲ್ಲಿ 247 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,027 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,90,856 ಮಂದಿಗೆ ಕೊರೊನಾ ಬಂದಿದೆ. 29,44,669 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.74 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.27 ರಷ್ಟಿದೆ. ಇದನ್ನೂ ಓದಿ: ವಿವಾಹಗಳಲ್ಲಿ ಕೇಕ್ ಕತ್ತರಿಸುವಂತಿಲ್ಲ, ಶಾಂಪೇನ್ ಹಾರಿಸುವಂತಿಲ್ಲ: ಕೊಡವ ಸಮಾಜದಿಂದ ನಿಷೇಧ
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 4,78,875 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,17,748 ಸ್ಯಾಂಪಲ್ (ಆರ್ಟಿ ಪಿಸಿಆರ್ 96,139 + 21,609 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಲಸಿಕೆ ಪಡೆಯದಿದ್ದರೆ ರೇಷನ್, ಗ್ಯಾಸ್, ಪೆಟ್ರೋಲ್ ಇಲ್ಲ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 176, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 1, ದಕ್ಷಿಣ ಕನ್ನಡ 13, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 29, ಹಾವೇರಿ 0, ಕಲಬುರಗಿ 2, ಕೊಡಗು 7, ಕೋಲಾರ 4, ಕೊಪ್ಪಳ 0, ಮಂಡ್ಯ 8, ಮೈಸೂರು 15, ರಾಯಚೂರು 0, ರಾಮನಗರ 1, ಶಿವಮೊಗ್ಗ 11, ತುಮಕೂರು 8, ಉಡುಪಿ 2, ಉತ್ತರ ಕನ್ನಡ 10, ವಿಜಯಪುರ, ಮತ್ತು ಯಾದಗಿರಿಯಲ್ಲಿ 1 ಪ್ರಕರಣ ದಾಖಲಾಗಿದೆ.