ವಾಷಿಂಗ್ಟನ್: ಅಮೆರಿಕದಲ್ಲಿ (America) ಹೆಲೆನ್ ಚಂಡಮಾರುತದಿಂದ (Hurricane) ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಚಂಡಮಾರುತದಿಂದ ಫ್ಲೋರಿಡಾ (Florida) ರಾಜ್ಯದ ರಾಜಧಾನಿ ತಲ್ಲಾಹಸ್ಸೀ ಬಳಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ರಸ್ತೆಗಳು, ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ನೆಲಸಮವಾಗಿವೆ. ಅಲ್ಲದೇ ಧಾರಾಕಾರ ಮಳೆಯಿಂದ ಹಲವಾರು ಪ್ರದೇಶಗಳು ಪ್ರವಾಹದಿಂದ (Flood) ತತ್ತರಿಸಿವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಮಟ್ಟದಲ್ಲಿ ಮುಜುಗರ – ಮುಳುಗಿತು Made In China ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆ
Advertisement
ದಕ್ಷಿಣ ಕೆರೊಲಿನಾದಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಜಾರ್ಜಿಯಾ ಗವರ್ನರ್ ಬ್ರಿಯಾನ್ ಕೆಂಪ್ ತನ್ನ ರಾಜ್ಯದಲ್ಲಿ ರಕ್ಷಣಾ ಸಿಬ್ಬಂದಿಯೂ ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ವಾಲ್ಡೋಸ್ಟಾ ನಗರವು 115ಕ್ಕೂ ಹೆಚ್ಚು ಕಟ್ಟಡಗಳು ಹಾನಿಗೊಳಗಾಗಿದ್ದು, ಅನೇಕ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
Advertisement
ಅಧ್ಯಕ್ಷ ಜೋ ಬೈಡನ್ ಮತ್ತು ಅಧಿಕಾರಿಗಳು ಹೆಲೆನ್ ಚಂಡಮಾರುತದಿಂದ ಹಾನಿಗೊಳಗಾಗುವ ಪ್ರದೇಶಗಳ ಬಗ್ಗೆ ಮೊದಲೇ ಸೂಚನೆ ನೀಡಿದ್ದರು. ಜನ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದರು. ಆದರೂ ಜನ ಮನೆಗಳಲ್ಲೇ ಉಳಿದಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ರಯಾಣಿಕರಿದ್ದ ವಿಮಾನ ಟೇಕಾಫ್ ಆಗ್ತಿದ್ದಂತೆಯೇ ಸೆಕ್ಸ್ ಶುರು ಹಚ್ಕೊಂಡ ಜೋಡಿಗೆ ಕೋರ್ಟ್ ಶಿಕ್ಷೆ