ಹಾವೇರಿ: ಕಾರಿನ ಗಾಜು ಒಡೆದು 33 ಸೆಕೆಂಡ್‌ನಲ್ಲಿ 33 ಲಕ್ಷ ದೋಚಿದ (Money Theft) ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾವೇರಿ ಪೊಲೀಸರು (Haveri Police) ಬಂಧಿಸಿದ್ದಾರೆ ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಬಂಧಿತ ಆರೋಪಿ. ಕಳೆದ ನಾಲ್ಕು ದಿನಗಳ ಹಿಂದೆ ಕಾರಿನ ಗಾಜು ಒಡೆದು 33 ಲಕ್ಷ ಹಣ ದೋಚಿ ಆರೋಪಿಗಳು ಪರಾರಿಯಾಗಿದ್ದರು. ಕಳ್ಳರ ಕೈಚಳಕದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸದ್ಯ ಆರೋಪಿಯಿಂದ 30 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ, ಸೋಪುಗಳ ಮಾರಾಟ ನಿಷೇಧ
Advertisement
Advertisement
ಘಟನೆ ಏನು?
ಸಿವಿಲ್ ಕಾಂಟ್ರ್ಯಾಕ್ಟರ್ ಸಂತೋಷ್ ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ 33 ಲಕ್ಷ ರೂ. ಹಣವನ್ನು ಸಂಬಂಧಿಕರ ಖಾತೆಯಿಂದ ಚೆಕ್ ಮುಖಾಂತರ ಡ್ರಾ ಮಾಡಿಕೊಂಡಿದ್ದರು. ಡ್ರಾ ಮಾಡಿದ ಹಣವನ್ನು ಕಾರಿನ ಹಿಂಭಾಗದ ಸೀಟಿನಲ್ಲಿಟ್ಟಿದ್ದರು. ಇದನ್ನೂ ಓದಿ: ರನ್ಯಾ ರಾವ್ ಶೋಕಿಗೆ ಅಧಿಕಾರಿಗಳೇ ಶಾಕ್ – ನಟಿ ಬಳಿಯಿತ್ತು ಕೋಟಿ ಮೌಲ್ಯದ 39 ವಿದೇಶಿ ವಾಚ್‌ಗಳು
Advertisement
Advertisement
ಸಂತೋಷ್ ಮಾ.6ರಂದು ಸಂಜೆ 4:05ಕ್ಕೆ ಮನೆ ಮುಂದೆ ಕಾರು ನಿಲ್ಲಿಸಿ, ಕಾರಿನಲ್ಲಿ ಹಣ ಬಿಟ್ಟು ಮನೆಯೊಳಗೆ ಹೋಗಿದ್ದರು. ಮನೆಯಲ್ಲಿ ಊಟ ಮಾಡಿ ವಾಪಸ್ ಸಂಜೆ 5:20ಕ್ಕೆ ಕಾರಿನ ಹತ್ತಿರ ಬಂದು ನೋಡಿದಾಗ ಕಾರಿನ ಗ್ಲಾಸ್ ಒಡೆದು ಹಣ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: Bengaluru| ಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ 70 ಲಕ್ಷ ವಂಚನೆ – ಆರೋಪಿ ಅರೆಸ್ಟ್
2 ಬೈಕ್‌ಗಳಲ್ಲಿ ಬಂದಿದ್ದ 4 ಜನ ಕಳ್ಳರಲ್ಲಿ ಒಬ್ಬ ಕಾರಿನ ಬಳಿ ಸುತ್ತಾಡಿ, ಕಾರಿನ ಗ್ಲಾಸ್ ಒಡೆದು ಕಾರಿನ ಒಳಹೊಕ್ಕು ಹಣವಿದ್ದ ಬ್ಯಾಗ್ ತೆಗೆದುಕೊಂಡಿದ್ದಾನೆ. ನಂತರ ಬೈಕ್‌ನಲ್ಲಿ ಬಂದ ಮತ್ತೊಬ್ಬ ಖದೀಮ ಆತನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: 7ನೇ ತರಗತಿ ವಿದ್ಯಾರ್ಥಿನಿಗೆ ಬಾಲ್ಯವಿವಾಹ – ಬರಲ್ಲ ಅಂತ ಕಿರುಚಾಡಿದ್ರೂ ಹೊತ್ತೊಯ್ದ ಪಾಪಿಗಳು