ಬೆಂಗಳೂರು: ದೊಮ್ಮಸಂದ್ರದ ಖಾಸಗಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಶಾಲೆಯ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಂದಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಪೋಷಕರು ಆತಂಕಕ್ಕೊಳಗಾಗಿದ್ದಾರೆ.
ಮಹಾದೇವಪುರದಿಂದ ಶಾಲೆಗೆ ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳಲ್ಲಿ ಮೊದಲು ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ಅವರನ್ನು ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿತ್ತು. ನಂತರ ಶಾಲೆಯ 497 ವಿದ್ಯಾರ್ಥಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ 33 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಇದನ್ನೂ ಓದಿ: ಆಫ್ರಿಕಾದಲ್ಲಿ ರೂಪಾಂತರ ಕೋವಿಡ್ ತಳಿ ಪತ್ತೆ – ಕಟ್ಟೆಚ್ಚರಕ್ಕೆ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ
8 ನೇ ತರಗತಿಯಲ್ಲಿ 1 ವಿದ್ಯಾರ್ಥಿಗೆ, 9 ನೇ ತರಗತಿಯ 12 ವಿದ್ಯಾರ್ಥಿಗಳಿಗೆ, 10 ನೇ ತರಗತಿಯ 8 ವಿದ್ಯಾರ್ಥಿಗಳಿಗೆ, 11 ನೇ ತರಗತಿಯಲ್ಲಿ 3 ವಿದ್ಯಾರ್ಥಿಗಳಿಗೆ ಹಾಗೂ 12ನೇ ತರಗತಿಯಲ್ಲಿ 9 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದನ್ನೂ ಓದಿ: ಮನೆಯಲ್ಲೇ ಹಣ, ಚಿನ್ನದ ಕೃಷಿ – ಭ್ರಷ್ಟರ ಆದಾಯಕ್ಕಿಂತ ಆಸ್ತಿ ಎಷ್ಟು ಹೆಚ್ಚಾಗಿದೆ?
ಸದ್ಯ ಎಲ್ಲಾ ವಿದ್ಯಾರ್ಥಿಗಳನ್ನು ದೊಮ್ಮಸಂದ್ರದ ಶಾಲೆಯಲ್ಲಿಯೇ ಐಸೋಲೇಟ್ ಮಾಡಲಾಗಿದೆ.