-ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ವಿವರಣೆ ಕೇಳಿದ ಎನ್‌ಜಿಟಿ
ನವದೆಹಲಿ: ಬೆಂಗಳೂರು (Bengaluru) ಸೇರಿದಂತೆ ದೇಶದ 10 ಮಹಾನಗರಗಳಲ್ಲಿ ವಾಯುಮಾಲಿನ್ಯದಿಂದ (Air Pollution) ವಾರ್ಷಿಕ 33 ಸಾವಿರ ಮಂದಿ ಸಾಯುತ್ತಿದ್ದಾರೆ ಎಂಬ ಅಧ್ಯಯನ ವರದಿ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಿವರಣೆ ಕೇಳಿದೆ. ಇದನ್ನೂ ಓದಿ: ಎಂಇಎಸ್ ಭಯೋತ್ಪಾದನಾ ಸಂಘಟನೆ: ಬೆಳಗಾವಿಯಲ್ಲಿ ಕರವೇ ಆಕ್ರೋಶ
Advertisement
ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನ ವರದಿಯ ಆಧಾರದಲ್ಲಿ, ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಎನ್‌ಜಿಟಿಯ ಅಧ್ಯಕ್ಷ ಪ್ರಕಾಶ್ ಶ್ರೀವಾಸ್ತವ, ನ್ಯಾಯಾಂಗ ಸದಸ್ಯ ಅರುಣ್ ಕುಮಾರ್ ತ್ಯಾಗಿ, ತಜ್ಞ ಸದಸ್ಯ ಎ ಸೆಂಥಿಲ್ ವೇಲ್ ಅವರ ನೇತೃತ್ವದ ಪ್ರಧಾನ ಪೀಠವು ಕೇಂದ್ರ ಪರಿಸರ ಸಚಿವಾಲಯ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಕಟ್ಟಡ ದುರಂತ ಸ್ಥಳಕ್ಕೆ ಭೇಟಿ ಕೊಟ್ಟ ಸಿಎಂ- ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
Advertisement
Advertisement
ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ( Delhi), ಹೈದರಾಬಾದ್, ಕೋಲ್ಕತ್ತಾ, ಮುಂಬೈ (Mumabi), ಪುಣೆ, ಶಿಮ್ಲಾ ಮತ್ತು ವಾರಣಾಸಿಯಲ್ಲಿ ವಾಯು ಮಾಲಿನ್ಯದಿಂದಾಗಿ ವಾರ್ಷಿಕವಾಗಿ 33,000 ಜನರು ಮೃತಪಡುತ್ತಿದ್ದಾರೆ. ಈ ನಗರಗಳ ಮಾಲಿನ್ಯ ಪ್ರಮಾಣ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಿಂತ ಹೆಚ್ಚು ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಮುಡಾದಲ್ಲಿ ಜಿಲ್ಲಾಧಿಕಾರಿ ಪಾತ್ರವಿಲ್ಲ, ಲೋಕಾಯುಕ್ತರಿಗೆ ಸ್ಪಷ್ಟನೆ ನೀಡಿದ್ದೇನೆ: ಜಿ.ಕುಮಾರ ನಾಯಕ್