ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಓಮಿಕ್ರಾನ್ ಸೋಂಕು ಪ್ರಕರಣ ವರದಿಯಾಗಿದೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 3ಕ್ಕೇರಿದೆ. ಇಂದು ಒಟ್ಟು 320 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 4 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 304 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,328 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 30,00,435 ಮಂದಿಗೆ ಕೊರೊನಾ ಬಂದಿದೆ. 29,54,817 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.21 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.27 ರಷ್ಟಿದೆ. ಇಂದು ಬೆಂಗಳೂರು ನಗರದಲ್ಲಿ 3 ಮತ್ತು ಬೀದರ್ನಲ್ಲಿ 1 ಒಟ್ಟು ನಾಲ್ಕು ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಓಮಿಕ್ರಾನ್ ಸೋಂಕು ಪತ್ತೆ- ರಾಜ್ಯದಲ್ಲಿ ಸಂಖ್ಯೆ 3ಕ್ಕೇರಿಕೆ
ರಾಜ್ಯದಲ್ಲಿ ಇಂದು ಒಟ್ಟು 63,870 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,18,696 ಸ್ಯಾಂಪಲ್ (ಆರ್ಟಿಪಿಸಿಆರ್ 1,03,516 + 15,180 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಆಂಧ್ರ, ಚಂಡೀಗಢದಲ್ಲಿ ಖಾತೆ ತೆರೆದ ಓಮಿಕ್ರಾನ್- ದೇಶದಲ್ಲಿ 35ಕ್ಕೇರಿದ ಸಂಖ್ಯೆ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 205, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 2, ದಕ್ಷಿಣ ಕನ್ನಡ 15, ದಾವಣಗೆರೆ 4, ಧಾರವಾಡ 3, ಗದಗ 0, ಹಾಸನ 5, ಹಾವೇರಿ 1, ಕಲಬುರಗಿ 1, ಕೊಡಗು 40, ಕೋಲಾರ 3, ಕೊಪ್ಪಳ 0, ಮಂಡ್ಯ 5, ಮೈಸೂರು 13, ರಾಯಚೂರು 0, ರಾಮನಗರ 2, ಶಿವಮೊಗ್ಗ 11, ತುಮಕೂರು 5, ಉಡುಪಿ 1, ಉತ್ತರ ಕನ್ನಡ 2, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.