Bengaluru CityCoronaDistrictsKarnatakaLatestMain Post

ರಾಜ್ಯದಲ್ಲಿ 335 ಕೊರೊನಾ ಪಾಸಿಟಿವ್ – 14 ಓಮಿಕ್ರಾನ್ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 335 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 5 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಪಾಸಿಟಿವ್ ಪ್ರಕರಣಗಳ ಒಟ್ಟು ಸಂಖ್ಯೆ 14ಕ್ಕೆ ಏರಿಕೆ ಕಂಡಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ 14 ಓಮಿಕ್ರಾನ್ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಒಟ್ಟು 286 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,120 ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 30,02,127 ಮಂದಿಗೆ ಕೊರೊನಾ ಬಂದಿದೆ. 29,56,691 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.49 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.28 ರಷ್ಟಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದ ಐವರು ಕಾಲೇಜು ವಿದ್ಯಾರ್ಥಿಗಳಿಗೆ ಓಮಿಕ್ರಾನ್‌

ರಾಜ್ಯದಲ್ಲಿ ಇಂದು ಒಟ್ಟು 2,38,442 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,18,032 ಸ್ಯಾಂಪಲ್ (ಆರ್‌ಟಿಪಿಸಿಆರ್ 97,541 + 20,491 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹಳ್ಳಿಗೆ 300 ಕೋವಿಡ್ ಲಸಿಕೆಗಳನ್ನು ಸಾಗಿಸಿದ ಡ್ರೋನ್

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 225, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 6, ಚಿತ್ರದುರ್ಗ 0, ದಕ್ಷಿಣ ಕನ್ನಡ 19, ದಾವಣಗೆರೆ 0, ಧಾರವಾಡ 5, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 1, ಕೊಡಗು 25, ಕೋಲಾರ 5, ಕೊಪ್ಪಳ 0, ಮಂಡ್ಯ 2, ಮೈಸೂರು 14, ರಾಯಚೂರು 1, ರಾಮನಗರ 2, ಶಿವಮೊಗ್ಗ 2, ತುಮಕೂರು 2, ಉಡುಪಿ 6, ಉತ್ತರ ಕನ್ನಡ 9, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Back to top button