ನೇಪಾಳದ ಆಸ್ಪತ್ರೆ-ಶಾಲೆಗಳಿಗೆ ಅಂಬುಲೆನ್ಸ್, ಶಾಲಾ ವಾಹನ ಗಿಫ್ಟ್ ಕೊಟ್ಟ ಭಾರತ

Public TV
2 Min Read
INDIA NEPAL

ಕಾಠ್ಮಂಡು: ನೇಪಾಳದ (Nepal) ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಭಾರತ (India)  84 ವಾಹನಗಳನ್ನು ಭಾನುವಾರ ಉಡಗೊರೆಯಾಗಿ ನೀಡಿದೆ.

ನೇಪಾಳದ ಸಚಿವ ಅಶೋಕ್ ಕುಮಾರ್ ರೈ ಅವರ ಸಮ್ಮುಖದಲ್ಲಿ ಭಾರತೀಯ ರಾಯಭಾರಿ ನವೀನ್ ಶ್ರೀವಾಸ್ತವ್ 34 ಅಂಬುಲೆನ್ಸ್‌ಗಳು (Ambulances) ಮತ್ತು 50 ಶಾಲಾ ಬಸ್‍ಗಳನ್ನು (School Bus) ಸಂಸ್ಥೆಗಳ ಪ್ರತಿನಿಧಿಗಳಿಗೆ ಹಸ್ತಾಂತರಿಸಿದ್ದಾರೆ.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳನ್ನು ಸುಧಾರಿಸಲು ಅನುಕೂಲವಾಗಲು ಈ ವಾಹನಗಳನ್ನು ನೀಡಲಾಗಿದೆ. ಈ ವಿಚಾರದಲ್ಲಿ ನೇಪಾಳ ಸರ್ಕಾರದ ಪ್ರಯತ್ನಗಳಿಗೆ ನೆರವಾಗುವುದು ನೇಪಾಳ-ಭಾರತ ಅಭಿವೃದ್ಧಿ ಪಾಲುದಾರಿಕೆ ಕಾರ್ಯಕ್ರಮದಲ್ಲಿ ಒಂದಾಗಿದೆ. ಅದರ ಅಡಿಯಲ್ಲಿ ವಾಹನಗಳನ್ನು ಉಡುಗೊರೆಯಾಗಿ ನೀಡುವುದು ಭಾರತ ಸರ್ಕಾರದ ದೀರ್ಘಕಾಲದ ಸಂಪ್ರದಾಯ ಎಂದು ಶ್ರೀವಾಸ್ತವ್ ಈ ವೇಳೆ ಹೇಳಿದ್ದಾರೆ. ಇದನ್ನೂ ಓದಿ: UPA ಮೈತ್ರಿ ಕೂಟದ ಮಹತ್ವದ ಸಭೆಗೆ ಬೆಂಗಳೂರಿನಲ್ಲಿ ಮುಹೂರ್ತ

ಜನರ ಜೀವನ ಮಟ್ಟವನ್ನು ಉನ್ನತ ಮಟ್ಟಕ್ಕೆ ಏರಿಸುವುದು ಇದರ ಮೂಲ ಉದ್ದೇಶವಾಗಿದೆ. ಈ ಪ್ರಯತ್ನ ನೇಪಾಳದ ಅಭಿವೃದ್ಧಿ ದಾರಿಯಲ್ಲಿ ಸ್ಪಷ್ಟವಾದ ಪ್ರಗತಿಯನ್ನು ತರಲಿದೆ ಎಂದು ಸ್ಥಳೀಯ ಮೇಯರ್ ಹೇಳಿಕೊಂಡಿದ್ದಾರೆ.

ಇದೇ ವೇಳೆ ನೇಪಾಳದಲ್ಲಿ ನಡೆಯುತ್ತಿರುವ ಭಾರತ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಶಿಕ್ಷಣ ಸಚಿವ ರೈ ಶ್ಲಾಘಿಸಿದರು. ಇಂತಹ ಯೋಜನೆಗಳಿಂದ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉತ್ತಮವಾಗಿರಲು ಸಹಕಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

1994 ರಿಂದ ಇಲ್ಲಿಯವರೆಗೂ ಭಾರತ ನೇಪಾಳದಾದ್ಯಂತ ವಿವಿಧ ಆರೋಗ್ಯ ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ 974 ಅಂಬುಲೆನ್ಸ್‌ಗಳು ಮತ್ತು 234 ಶಾಲಾ ಬಸ್‍ಗಳನ್ನು ಉಡುಗೊರೆಯಾಗಿ ನೀಡಿದೆ. ಇದನ್ನೂ ಓದಿ: ತತ್ವ-ಸಿದ್ಧಾಂತಗಳಿಗೆ ತಿಲಾಂಜಲಿ ಇಟ್ಟು ಅಧಿಕಾರಕ್ಕೆ ಬರಲು ವಿಪಕ್ಷಗಳ ಪ್ರಯತ್ನ: ಎನ್.ರವಿಕುಮಾರ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article