ಒಟ್ಟು 34 ಕೇಸ್ – 28 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

Public TV
1 Min Read
CORONA 5

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 34 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ಮತ್ತು ಮೈಸೂರು ಹೊರತುಪಡಿಸಿ ಉಳಿದ 28 ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಕೇಸ್ ದಾಖಲಾಗಿದೆ. ಅಲ್ಲದೆ ಶೂನ್ಯ ಮರಣ ಪ್ರಕರಣ ಇಂದು ಕೂಡ ಮುಂದುವರಿದಿದೆ.

CORONA REPORT IN 4 02 2022.1

ಬೆಂಗಳೂರಿನಲ್ಲಿ 31 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ಮೂಲಕ ಮರಣ ಪ್ರಮಾಣ 0.%ಕ್ಕೆ ಇಳಿಕೆ ಕಂಡಿದೆ.  ರಾಜ್ಯದಲ್ಲಿ ಈವರೆಗೆ ಒಟ್ಟು  40,054 ಮರಣ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 0.19%ಕ್ಕೆ ಮತ್ತು ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,516ಕ್ಕೆ ಇಳಿಕೆ ಕಂಡಿದೆ. ಒಟ್ಟು 79 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಮತ್ತೆ ಶಾಕ್‌ ಕೊಟ್ಟ ಕೋವಿಡ್-‌ ಇಂಗ್ಲೆಂಡ್‌ನಲ್ಲಿ ʻXEʼ ಹೊಸ ರೂಪಾಂತರಿ ಪತ್ತೆ

CORONA REPORT IN 4 02 2022.2

ಈವರೆಗೆ ರಾಜ್ಯದಲ್ಲಿ ಒಟ್ಟು 39,45,610 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,03,998 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 10,696 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 17,417 ಸ್ಯಾಂಪಲ್ (ಆರ್​ಟಿಪಿಸಿಆರ್ 14,927 + 2,490 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಸ್ವಚ್ಛ ಭಾರತಕ್ಕೆ ವಿಶೇಷ ಪ್ರಯತ್ನ: ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ

CORONA REPORT IN 4 02 2022

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 31 ಮತ್ತು ಮೈಸೂರಿನಲ್ಲಿ 3 ಪ್ರಕರಣ ಹೊರತುಪಡಿಸಿ ಉಳಿದ 28 ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *