ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 34 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ಮತ್ತು ಮೈಸೂರು ಹೊರತುಪಡಿಸಿ ಉಳಿದ 28 ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಕೇಸ್ ದಾಖಲಾಗಿದೆ. ಅಲ್ಲದೆ ಶೂನ್ಯ ಮರಣ ಪ್ರಕರಣ ಇಂದು ಕೂಡ ಮುಂದುವರಿದಿದೆ.
Advertisement
ಬೆಂಗಳೂರಿನಲ್ಲಿ 31 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ಮೂಲಕ ಮರಣ ಪ್ರಮಾಣ 0.%ಕ್ಕೆ ಇಳಿಕೆ ಕಂಡಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,054 ಮರಣ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 0.19%ಕ್ಕೆ ಮತ್ತು ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,516ಕ್ಕೆ ಇಳಿಕೆ ಕಂಡಿದೆ. ಒಟ್ಟು 79 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಮತ್ತೆ ಶಾಕ್ ಕೊಟ್ಟ ಕೋವಿಡ್- ಇಂಗ್ಲೆಂಡ್ನಲ್ಲಿ ʻXEʼ ಹೊಸ ರೂಪಾಂತರಿ ಪತ್ತೆ
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,45,610 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,03,998 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 10,696 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 17,417 ಸ್ಯಾಂಪಲ್ (ಆರ್ಟಿಪಿಸಿಆರ್ 14,927 + 2,490 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಸ್ವಚ್ಛ ಭಾರತಕ್ಕೆ ವಿಶೇಷ ಪ್ರಯತ್ನ: ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 31 ಮತ್ತು ಮೈಸೂರಿನಲ್ಲಿ 3 ಪ್ರಕರಣ ಹೊರತುಪಡಿಸಿ ಉಳಿದ 28 ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.