ವಾಷಿಂಗ್ಟನ್: ಅಮೆರಿಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 1 ಲಕ್ಷದ ಗಡಿಯನ್ನು ದಾಟಿದ್ದು ದೇಶಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ.
ಕಳೆದ 24 ಗಂಟೆಯಲ್ಲಿ ಅಮೆರಿಕದಲ್ಲಿ 18 ಸಾವಿರ ಮಂದಿಗೆ ಕೊರೊನಾ ಬಂದಿದ್ದರೆ 345 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಅಮೆರಿಕದಲ್ಲಿ 1.04 ಲಕ್ಷ ಜನರಿಗೆ ಕೊರೊನಾ ಬಂದಿದೆ. ಈ ಪೈಕಿ 1,706 ಮಂದಿ ಕೊರೊನಾದಿಂದ ಮೃತಪಟ್ಟರೆ 2,465 ಮಂದಿ ಗುಣಮುಖರಾಗಿದ್ದಾರೆ.
Advertisement
ಒಟ್ಟು ವಿಶ್ವದಲ್ಲಿ 5,96,852 ಮಂದಿಗೆ ಕೊರೊನಾ ಬಂದಿದ್ದು 27,352 ಮಂದಿ ಮೃತಪಟ್ಟಿದ್ದಾರೆ. ಸದ್ಯ ಈಗ 4.36ಲಕ್ಷ ಮಂದಿ ಕೊರೊನಾದಿಂದ ಬಳಲುತ್ತಿದ್ದು 1.33 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಇಟಲಿಯಲ್ಲಿ 969 ಮಂದಿ ಮೃತಪಟ್ಟರೆ, ಸ್ಪೇನ್‍ನಲ್ಲಿ 773 ಮಂದಿ ಮೃತರಾಗಿದ್ದಾರೆ.
Advertisement
ಅತಿ ಹೆಚ್ಚು ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ ಅಮೆರಿಕ(1.04 ಲಕ್ಷ), ಇಟಲಿ(86,498), ಚೀನಾ(81,285), ಸ್ಪೇನ್ (65,718), ಜರ್ಮನಿ(50,871) ಕ್ರಮವಾಗಿ ಮೊದಲ ಐದು ಸ್ಥಾನಗಳನ್ನು ಪಡೆದುಕೊಂಡಿದೆ.