ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 347 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 166 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 100 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 4 ಮರಣ ಪ್ರಕರಣ ದಾಖಲಾಗಿದೆ.
Advertisement
ರಾಜ್ಯದಲ್ಲಿ 255 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,708 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,88.041 ಮಂದಿಗೆ ಕೊರೊನಾ ಬಂದಿದೆ. 29,41,233 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.88 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.31 ರಷ್ಟಿದೆ. ಇದನ್ನೂ ಓದಿ: ನಕಲಿ ಬಾಂಬ್ ಸಿಕ್ಕ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಭದ್ರತಾ ತಪಾಸಣೆ
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 1,66,234 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,08,868 ಸ್ಯಾಂಪಲ್ (ಆರ್ಟಿ ಪಿಸಿಆರ್ 88,463 + 20,405 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ತಂದೆ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 166, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 2, ಚಿತ್ರದುರ್ಗ 1, ದಕ್ಷಿಣ ಕನ್ನಡ 21, ದಾವಣಗೆರೆ 4, ಧಾರವಾಡ 1, ಗದಗ 0, ಹಾಸನ 13, ಹಾವೇರಿ 0, ಕಲಬುರಗಿ 1, ಕೊಡಗು 9, ಕೋಲಾರ 3, ಕೊಪ್ಪಳ 0, ಮಂಡ್ಯ 8, ಮೈಸೂರು 44, ರಾಯಚೂರು 1, ರಾಮನಗರ 1, ಶಿವಮೊಗ್ಗ 9, ತುಮಕೂರು 19, ಉಡುಪಿ 14, ಉತ್ತರ ಕನ್ನಡ 14, ವಿಜಯಪುರ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.