ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಪ್ರತಿನಿತ್ಯ ಏರಿಳಿತ ಕಂಡು ಬರುತ್ತಿದೆ. ನಿನ್ನೆ 214 ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾದರೆ ಇಂದು 349 ಮಂದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಕೊರೊನಾ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಇಂದು 14 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ 12 ಮಂದಿ ಕೊರೊನಾದಿಂದ ಮೃತಪಟ್ಟಿದ್ದರು. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಇಂದು 161 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ನಿನ್ನೆ 83 ಮಂದಿಗೆ ಕೊರೊನಾ ದೃಢಪಟ್ಟಿತ್ತು. 125 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಐವರು ಮೃತಪಟ್ಟಿರುವುದು ವರದಿಯಾಗಿದೆ.
Advertisement
Advertisement
ರಾಜ್ಯದಲ್ಲಿ 399 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,100 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,84,022 ಮಂದಿಗೆ ಕೊರೊನಾ ಬಂದಿದೆ. 29,36,926 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.4.01 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.41 ರಷ್ಟಿದೆ.
Advertisement
Advertisement
ಇಂದು ರಾಜ್ಯದಲ್ಲಿ ಇಂದು ಒಟ್ಟು 1,15,156 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 85022 ಸ್ಯಾಂಪಲ್ (RTPCR 56,664 + 28,358 Rapid ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಧರ್ಮದ ಅಫೀಮು ತಿಂದು ಅಮಲಿನಲ್ಲಿ ತೇಲಾಡುತ್ತಿರೋ ಬಿಜೆಪಿಗರು ನಿಜವಾದ ಡ್ರಗ್ಗಿಸ್ಟ್ಗಳು: ಶ್ರೀನಿವಾಸ್ ಬಿ.ವಿ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಒಟ್ಟು 5 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 161, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 8, ಚಿತ್ರದುರ್ಗ 4, ದಕ್ಷಿಣ ಕನ್ನಡ 24, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 23, ಹಾವೇರಿ 0, ಕಲಬುರಗಿ 0, ಕೊಡಗು 4, ಕೋಲಾರ 5, ಕೊಪ್ಪಳ 2, ಮಂಡ್ಯ 4, ಮೈಸೂರು 37, ರಾಯಚೂರು 1, ರಾಮನಗರ 4, ಶಿವಮೊಗ್ಗ 12, ತುಮಕೂರು 14, ಉಡುಪಿ 12, ಉತ್ತರ ಕನ್ನಡ 19, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಪ್ರಕರಣ ದಾಖಲಾಗಿದೆ.
ಇಂದಿನ 19/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/c8t7yLv7Gb @cmofKarnataka @mla_sudhakar @Randeep_Dev @HubballiRailway@KodaguConnect @IChangeMyCity@WeAreBangalore @bangalore@Belagavi_infra @PIBBengaluru @KarnatakaVarthe pic.twitter.com/9xUPf1LD9m
— K'taka Health Dept (@DHFWKA) October 19, 2021