ನವದೆಹಲಿ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಹೂಡಿರುವ ಮಾಜಿ ಡಿಸಿಎಂ ಸಚಿನ್ ಪೈಲಟ್ ತಮ್ಮ ವಿರುದ್ಧ ಕೇಳಿ ಬಂದಿದ್ದ 35 ಕೋಟಿ ರೂ. ಹಣದ ಆಮಿಷದ ಆರೋಪ ರಹಿತ ಎಂದಿದ್ದು, ಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಅವರಿಗೆ ಲೀಗಲ್ ನೋಟಿಸ್ ನೀಡಿದ್ದಾರೆ.
ಸಚಿನ್ ಪೈಲಟ್ ತಮ್ಮನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೆ 35 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದಿದ್ದೆ ಎಂದು ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಆರೋಪಿಸಿದ್ದರು. ಈ ಆರೋಪವನ್ನು ತಿರಸ್ಕರಿಸಿದ್ದ ಸಚಿನ್ ಪೈಲಟ್, ನ್ಯಾಯವನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದರು. ಅಲ್ಲದೇ ತಮ್ಮ ಮೇಲಿನ ಇಂತಹ ಅಸಹ್ಯಕರ ಆರೋಪಗಳಿಗೆ ಮಾಡಿರುವುದಕ್ಕೆ ಅಚ್ಚರಿಯಾಗುವುದಿಲ್ಲ. ಆದರೆ ಇದು ಹೆಚ್ಚು ದುಃಖವನ್ನು ನೀಡುತ್ತದೆ ಎಂದಿದ್ದಾರೆ.
Advertisement
Advertisement
ತಮ್ಮ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿಂದೆ ಸಚಿನ್ ಪೈಲಟ್ ಬಣದಲ್ಲಿದ್ದ ಭನ್ವರ್ ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ ಸರ್ಕಾರವನ್ನು ಉರುಳಿಸಿರುವ ಕುರಿತು ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದ ಆಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ಕಾಂಗ್ರೆಸ್ ಪಕ್ಷ ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಛಾಟಣೆ ಮಾಡಿತ್ತು.
Advertisement
ಇತ್ತ ಕಾಂಗ್ರೆಸ್ ಸ್ಪೀಕರ್ ನೀಡಿದ್ದ ಅನರ್ಹತೆಯ ನೋಟಿಸ್‍ಗೆ ಹೈ ಕೋರ್ಟ್ ತಾತ್ಕಲಿಕ ರಿಲೀಫ್ ನೀಡಿದೆ. ಬಂಡಾಯ ಶಾಸಕರು ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ್ದ ಕೋರ್ಟ್, ತೀರ್ಪನ್ನು ಶುಕ್ರವಾರದ ವರೆಗೂ ಕಾಯ್ದಿರಿಸಿ ಅಲ್ಲಿವರೆಗೆ ಶಾಸಕರ ವಿರುದ್ಧ ಯಾವುದೇ ರೀತಿಯ ಕ್ರಮಕೈಗೊಳ್ಳಬಾರದು ಎಂದು ಹೇಳಿದೆ. ಪರಿಣಾಮ ಸಚಿನ್ ಪೈಲಟ್ ಬಣಕ್ಕೆ ತಾತ್ಕಲಿಕ ರಿಲೀಫ್ ಲಭಿಸಿದೆ.