ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 35 ಕ್ರಿಮಿನಲ್ ಕೇಸ್‌ಗಳನ್ನು (Criminal Case) ಹಿಂಪಡೆಯಲು ರಾಜ್ಯ ಸರ್ಕಾರ (Karnataka Government) ನಿರ್ಧರಿಸಿದೆ.
ಇಂದು ನಡೆದ ಸಂಪುಟ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು (BJP Workers), ಹಿಂದೂ ಕಾರ್ಯಕರ್ತರು (Hindu Activists), ರೈತ ಮುಖಂಡರು ಮತ್ತು ಕನ್ನಡ ಪರ ಕಾರ್ಯಕರ್ತರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಂಪುಟ ಉಪಸಮಿತಿ ಶಿಫಾರಸುಗಳನ್ನು ಆಧರಿಸಿ ಹಿಂಪಡೆಯಲು ನಿರ್ಧರಿಸಲಾಯ್ತು. ಆದರೆ ಯಾವ ಯಾವ ಪ್ರಕರಣಗಳನ್ನು ಹಿಂಪಡೆಯಲಾಗುತ್ತಿದೆ ಎಂಬ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್-21 ಫೈಟರ್ ಜೆಟ್ ಸೇನೆಯಿಂದ ನಿವೃತ್ತಿ
Advertisement
Advertisement
11,133 ಪೌರ ಕಾರ್ಮಿಕರಿಗೆ (Civic Workers) ಖಾಯಂ ನೌಕರಿ: ಸಿಹಿ ಸುದ್ದಿ ಅಂದ್ರೆ ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಂಪುಟ ನಿರ್ಧರಿಸಿದೆ. ಇದನ್ನೂ ಓದಿ: ಬಾಲಿವುಡ್‌ನ ಈ ನಟನ ಜೊತೆ ಹಸೆಮಣೆ ಏರಲು ರೆಡಿಯಾದ `ಗೂಗ್ಲಿ’ ನಟಿ
Advertisement
Advertisement
ಈ ನೌಕರರಿಗೆ 17,000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಅನೇಕ ದಿನಗಳಿಂದ ಹೋರಾಟ ಮಾಡ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಈ ಮಧ್ಯೆ ಮಹತ್ವದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಎಸ್‌ಎಸ್‌ಎಲ್‌ಸಿ ಬೋರ್ಡ್‌ನಲ್ಲಿ ಪಿಯುಸಿ ಬೋರ್ಡ್ ವಿಲೀನ ಮಾಡುವ ವಿಧೇಯಕವನ್ನು ನಾಳೆ ಸದನದಲ್ಲಿ ಮಂಡಿಸಲಾಗುತ್ತದೆ. ಕರ್ನಾಟಕ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ. ಇದು ಕೂಡ ನಾಳೆ ಸದನದಲ್ಲಿ ಮಂಡನೆ ಆಗಲಿದೆ.