LatestNational

ಮೋದಿ ರ‍್ಯಾಲಿ ವೀಕ್ಷಿಸಲು ತೆರಳುತ್ತಿದ್ದ ಬಸ್ ಪಲ್ಟಿ- 35 ಮಕ್ಕಳಿಗೆ ಗಾಯ

ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ರ‍್ಯಾಲಿ ವೀಕ್ಷಿಸಲು ತೆರಳುತ್ತಿದ್ದ ಬಸ್ಸೊಂದು ಪಲ್ಟಿಯಾದ ಪರಿಣಾಮ 35ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಕಂಗ್ರಾದಲ್ಲಿ ನಡೆದಿದೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಹೀಗಾಗಿ ಸ್ಥಳೀಯ ಕಂಪ್ಯೂಟರ್ ಶಾಲೆಯ ಮಕ್ಕಳೆಲ್ಲಾ ಬಸ್ ನಲ್ಲಿ ರ‍್ಯಾಲಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳುತ್ತಿದ್ದರು.

ಈ ವೇಳೆ ಕಾಂಗ್ರಾ ಬಳಿ ಬಸ್ ಏಕಾಏಕಿ ಪಲ್ಟಿಯಾಗಿದೆ. ಪರಿಣಾಮ 35ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದರೆ, 5 ಮಂದಿ ಸ್ಥಿತಿಯ ಗಂಭೀರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಾಹಿತಿಗಳ ಪ್ರಕಾರ 32 ಆಸನಗಳುಳ್ಳ ಬಸ್‍ನಲ್ಲಿ 45 ಮಕ್ಕಳು ಪ್ರಯಾಣ ಬೆಳೆಸಿದ್ದು, ಅವಘಡಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

r6c7mt6g kangra

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Related Articles

Leave a Reply

Your email address will not be published. Required fields are marked *