36 ಸೇತುವೆಗಳು ಸಂಚಾರಕ್ಕೆ ಅನರ್ಹ – ದುರಂತ ಸಂಭವಿಸೋದಕ್ಕೂ ಮುನ್ನವೇ ಎಚ್ಚೆತ್ತ ಸರ್ಕಾರ

- ಶೀಘ್ರವೇ ಹೊಸ ಸೇತುವೆಗಳ ನಿರ್ಮಾಣಕ್ಕೆ ಸೂಚನೆ

Advertisements

ಡೆಹ್ರಾಡೂನ್: ಉತ್ತರಾಖಂಡದ (Uttarakhand) ಸಿಎಂ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರ ನಿರ್ದೇಶನದ ಮೇರೆಗೆ ರಾಜ್ಯದ 5 ವಲಯಗಳಲ್ಲಿ ನಡೆಸಿದ ಸೇತುವೆ ಸುರಕ್ಷತಾ ಲೆಕ್ಕ ಪರಿಶೋಧನೆಯಲ್ಲಿ 36 ಸೇತುವೆಗಳು ಸಂಚಾರಕ್ಕೆ ಅನರ್ಹವಾಗಿರುವುದು ಕಂಡುಬಂದಿದೆ.

Advertisements

ಗುಜರಾತಿನ ಮೋರ್ಬಿ ತೂಗುಸೇತುವೆ ದುರಂತದ ಬಳಿಕ ಎಚ್ಚೆತ್ತ ಮುಖ್ಯಮಂತ್ರಿಗಳು ನವೆಂಬರ್ 3 ರಂದು ಪರಿಶೀಲನೆ ನಿರ್ದೇಶನ ನೀಡಿದ್ದರು. ಅದರಂತೆ ಲೋಕೋಪಯೋಗಿ ಇಲಾಖೆ (PDW) ಸುರಕ್ಷತಾ ಪರಿಶೀಲನೆ ನಡೆಸಿತ್ತು. ಇದೀಗ ರಾಜ್ಯದಲ್ಲಿರುವ 3,262 ಸೇತುವೆಗಳ ಪೈಕಿ 2,618 ಸೇತುವೆಗಳ ಸುರಕ್ಷತಾ ಲೆಕ್ಕ ಪರಿಶೋಧನಾ ವರದಿಯನ್ನು ಪಿಡಬ್ಲ್ಯೂಡಿ ಇಲಾಖೆ, ಸರ್ಕಾರಕ್ಕೆ ಹಸ್ತಾಂತರಿಸಿದೆ. ಇದರಲ್ಲಿ 36 ಸೇತುವೆಗಳು ಸಂಚಾರಕ್ಕೆ ಅನರ್ಹವಾಗಿದೆ ಎಂದು ಅಧಿಕಾರಿಗಳು ಆಡಿಟ್ ವರದಿಯ ಮೂಲಕ ತಿಳಿಸಿರುವುದಾಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆರ್.ಕೆ.ಸುಧಾಂಶು ಹೇಳಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಹತ್ಯೆ ಮಾಡಿದ್ದಕ್ಕೆ ಪಶ್ಚಾತ್ತಾಪವಿದೆ – ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್

Advertisements

ಶಿಥಿಲಗೊಂಡಿರುವ ಸೇತುವೆಗಳನ್ನು ಕೆಡವಿ, ಸಕಾಲದಲ್ಲಿ ಹೊಸ ಸೇತುವೆಗಳನ್ನು (Bridges) ನಿರ್ಮಿಸಲು ಸರ್ಕಾರದಿಂದ (Government) ಸೂಚನೆ ನೀಡಲಾಗಿದೆ. ಅದರಂತೆ ಕ್ರಮ ಕೈಗೊಳ್ಳಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಆಡಿಟ್ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಪ್ರಧಾನಿ ಪಕ್ಕ ಕುಳಿತು ಬಿಜೆಪಿಯನ್ನು ಹಾಡಿ ಹೊಗಳಿದ ಬಾಲಕಿ – ಶಭಾಶ್ ಅಂದ ಮೋದಿ

ಕಳೆದ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ಮೋರ್ಬಿ ತೂಗು ಸೇತುವೆ ಕುಸಿದು ಸುಮಾರು 135 ಮಂದಿ ಸಾವನ್ನಪ್ಪಿದರು. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ದುರಂತ ಸಂಭವಿಸೋದಕ್ಕೂ ಮುನ್ನವೇ ಎಚ್ಚೆತ್ತ ಉತ್ತರಾಖಂಡ ಸರ್ಕಾರ ರಾಜ್ಯದ ಸೇತುವೆಗಳ ಸ್ಥಿತಿಯನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿತ್ತು.

Advertisements

Live Tv

Advertisements
Exit mobile version