ಡೆಹ್ರಾಡೂನ್: ಉತ್ತರಾಖಂಡದ (Uttarakhand) ಅಲ್ಮೋರಾ ಜಿಲ್ಲೆಯ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಕಮರಿಗೆ ಬಿದ್ದು ಸಾವನ್ನಪ್ಪಿದವರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದಾರೆ. ಇದರೊಂದಿಗೆ ಗಾಯಗೊಂಡವರ ಸಂಖ್ಯೆ 19ಕ್ಕೆ ಏರಿದೆ. ಇಂದು (ನ.4) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.
Heartful Prayers for the Victims of #Almora Bus Accident. May God Give strength to the families to bear the pain of loosing loved ones.🥲
36 People De@d in this #BusAccident in #Uttarakhand.
Om Shanti 🙏#AlmoraBusAccident #ViralVideo #stockmarketscrash #irangirl #Delhi pic.twitter.com/Oy29ITcawr
— Sunaina Bhola (@sunaina_bhola) November 4, 2024
Advertisement
ಸದ್ಯ ಎನ್‌ಡಿಆರ್‌ಎಫ್ (NDRF), ಎಸ್‌ಡಿಆರ್‌ಎಫ್ (SDRF) ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ, ಉಪ್ಪಿನಂಗಡಿ ಉಪಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
Advertisement
Advertisement
ತಲಾ 4 ಲಕ್ಷ ರೂ. ಪರಿಹಾರ:
ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.