Bengaluru City
378 ಪಾಸಿಟಿವ್, 3 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ – 28,756 ಮಂದಿಗೆ ಲಸಿಕೆ

ಬೆಂಗಳೂರು: ಇಂದು ಕರ್ನಾಟಕದಲ್ಲಿ 378 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 537 ಜನ ಡಿಸ್ಚಾರ್ಜ್ ಆಗಿದ್ದಾರೆ. 3 ಜನ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ ಒಟ್ಟು 79,703 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 28,756 (ಶೇ.36)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.
ಇಂದು ಬಾಗಲಕೋಟೆ, ಹಾಸನ, ಹಾವೇರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,46,454 ಕ್ಕೆ ಏರಿಕೆ ಆಗಿದೆ. ಈ ಪೈಕಿ 9,28,461 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,698 ಸಕ್ರಿಯ ಪ್ರಕರಣಗಳಿವೆ.
ಒಟ್ಟು ಇಲ್ಲಿಯವರೆಗೆ 12,276 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 124 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 4,321 ಆಂಟಿಜನ್ ಟೆಸ್ಟ್, 50,303 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 54,624 ಮಂದಿಗೆ ಪರೀಕ್ಷೆ ಮಾಡಲಾಗಿದೆ.
ಇಂದು ಬೆಂಗಳೂರಿನಲ್ಲಿ 253 ಕೇಸ್ ವರದಿಯಾಗಿದೆ. ದಕ್ಷಿಣ ಕನ್ನಡ 25, ಮೈಸೂರು 17, ಕಲಬುರಗಿ 10, ಮತ್ತು ತುಮಕೂರಿನಲ್ಲಿ 10 ಮಂದಿಗೆ ಸೋಂಕು ಬಂದಿದೆ. ಒಟ್ಟು 124 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 63, ಕಲಬುರುಗಿಯಲ್ಲಿ 10, ದಕ್ಷಿಣ ಕನ್ನಡ 5, ಮತ್ತು ಹಾಸನದ 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
