KarnatakaBengaluru CityCoronaDistrictsLatestMain Post

ರಾಜ್ಯದಲ್ಲಿ ಇಂದು 378 ಮಂದಿಗೆ ಕೊರೊನಾ, 11 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಪ್ರತಿನಿತ್ಯ ಏರಿಳಿತ ಕಂಡು ಬರುತ್ತಿದೆ. ನಿನ್ನೆಗಿಂತ ಇಂದು ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಇಂದು 378 ಮಂದಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.

ಕೊರೊನಾ ಸಾವಿನ ಸಂಖ್ಯೆಯಲ್ಲಿಯೂ ಇಂದು ಏರಿಕೆ ಕಂಡಿದ್ದು, ಇಂದು 11 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 195 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. 239 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 7 ಮಂದಿ ಮೃತಪಟ್ಟಿರುವುದು ವರದಿಯಾಗಿದೆ.

ರಾಜ್ಯದಲ್ಲಿ ಇಂದು 378 ಮಂದಿಗೆ ಕೊರೊನಾ, 11 ಸಾವು

ರಾಜ್ಯದಲ್ಲಿ 464 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,891 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,85,227 ಮಂದಿಗೆ ಕೊರೊನಾ ಬಂದಿದೆ. 29,38,312 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.91 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.36 ರಷ್ಟಿದೆ.

ಇಂದು ರಾಜ್ಯದಲ್ಲಿ ಇಂದು ಒಟ್ಟು 6,34,202 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,03,121 ಸ್ಯಾಂಪಲ್ (ಆರ್ ಟಿ ಪಿಸಿಆರ್ 75,896 + 27,225 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬಡ್ಡಿ ಹಣ ವಸೂಲಿಗೆ ಬಂದು ತೆಗೆದುಕೊಂಡು ಹೋದ ಬೈಕ್ ತರಲು ಹೋಗಿ ಕೊಲೆಯಾದ್ರು!

ರಾಜ್ಯದಲ್ಲಿ ಇಂದು 378 ಮಂದಿಗೆ ಕೊರೊನಾ, 11 ಸಾವು

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಕೂಡ ಒಟ್ಟು 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 195, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 24, ದಾವಣಗೆರೆ 1, ಧಾರವಾಡ 5, ಗದಗ 0, ಹಾಸನ 21, ಹಾವೇರಿ 0, ಕಲಬುರಗಿ 0, ಕೊಡಗು 12, ಕೋಲಾರ 6, ಕೊಪ್ಪಳ 0, ಮಂಡ್ಯ 1, ಮೈಸೂರು 23, ರಾಯಚೂರು 1, ರಾಮನಗರ 0, ಶಿವಮೊಗ್ಗ 15, ತುಮಕೂರು 23, ಉಡುಪಿ 14, ಉತ್ತರ ಕನ್ನಡ 8, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 0 ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *