ಬೆಂಗಳೂರು: ಮೆಟ್ರೋ (Metro)ಕಾಮಗಾರಿಗೆ ಸಂಬಂಧಿಸಿದಂತೆ ಇದುವರೆಗೂ 50 ಜನ ಅಪಘಾತಕ್ಕೊಳಗಾಗಿದ್ದಾರೆ. ಅದರಲ್ಲಿ 38 ಜನರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿಧಾನಪರಿಷತ್‍ನಲ್ಲಿ (State Legislative Council) ತಿಳಿಸಿದ್ದಾರೆ.
Advertisement
ವಿಧಾನಪರಿಷತ್ ಸದಸ್ಯರೊಬ್ಬರ ಪ್ರಶ್ನೆಗೆ ಅವರು ಉತ್ತರಿಸುವಾಗ, ಇದುವರೆಗೂ ಆದ ಮೆಟ್ರೋ ಕಾಮಗಾರಿ ವೇಳೆ ಸಂಭವಿಸಿದ ವಿವಿಧ ಅನಾಹುತಗಳಿಂದ ಆದ ಸಾವು ನೋವುಗಳು, ನೀಡಲಾದ ಪರಿಹಾರ ಹಾಗೂ ಜರುಗಿಸಲಾದ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
Advertisement
ಕಾಮಗಾರಿ ನಡೆಯುವಾಗ ಆದ ಅವಘಡಗಳಿಂದ ಮೃತಪಟ್ಟವರ ಕುಟುಂಬಗಳಿಗೆ 3.15 ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಲಾಗಿದೆ. ಅವಘಡಕ್ಕೆ ಕಾರಣರಾದ ಮೂರು ಎಂಜಿನಿಯರ್‌ಗಳನ್ನು (Engineer) ಅಮಾನತು ಮಾಡಲಾಗಿದೆ. ಗುತ್ತಿಗೆದಾರರಿಗೆ 1.17 ಕೋಟಿ ರೂ.ಗಳನ್ನು ದಂಡ ವಿಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮೀನೂಟ ಸವಿದು ದೇವರ ದರ್ಶನ ಮಾಡಿದ ಸಿ.ಟಿ ರವಿ ಫೋಟೋ ವೈರಲ್
Advertisement
Advertisement
ಅವಘಡಗಳನ್ನು ತಪ್ಪಿಸಲು ಹೆಣ್ಣೂರು ಮೆಟ್ರೋ ಪಿಲ್ಲರ್ ದುರಂತದ ಬಳಿಕ ತೆಗೆದುಕೊಂಡ ಕ್ರಮಗಳು ಮತ್ತು ಕೈಪಿಡಿ ಪ್ರಕಾರವೇ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.
ಗುತ್ತಿಗೆದಾರರ ಸುರಕ್ಷತೆ, ಆರೋಗ್ಯ ಮತ್ತು ಪರಿಸರ ಕೈಪಿಡಿ ಯೋಜನೆಗೆ ಅನುಗುಣವಾಗಿ ಎಲ್ಲಾ ಸಿಬ್ಬಂದಿಯನ್ನು ಆಯ್ಕೆ ಮಾಡಬೇಕು. ಯೋಜನೆಯ ನಿಯಮದಂತೆ ತಪಾಸಣೆ ಮತ್ತು ಪರಿಶೋಧನೆ ನಡೆಸಬೇಕು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬೇಕು, ಶೀಘ್ರವೇ ಪ್ರಕರಣದ ವಿಚಾರಣೆ ನಡೆಸಿ- ಸುಪ್ರೀಂಗೆ ವಕೀಲರ ಮನವಿ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k