ಗಾಂಧಿನಗರ: ಗುಜರಾತ್‍ನ (Gujarat) ಪಂಚಮಹಲ್‍ನ ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ (Accident) 38 ರಾಜ್ಯ ರಿಸರ್ವ್ ಪೊಲೀಸ್ (ಎಸ್‍ಆರ್‌ಪಿ) ಸಿಬ್ಬಂದಿ ಗಾಯಗೊಂಡಿದ್ದು, ಅದರಲ್ಲಿ ಒಂಬತ್ತು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಗುಡ್ಡಗಾಡು ಪ್ರದೇಶದಲ್ಲಿ ಬಸ್ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಇದರಿಂದಾಗಿ ಹೆಚ್ಚಿನ ಜನರಿಗೆ ಗಾಯವಾಗಿದೆ. ಪೊಲೀಸರು (Police) ಪಾವಗಡದಲ್ಲಿ ಫೈರಿಂಗ್ ಅಭ್ಯಾಸ ಮುಗಿಸಿ ದಾಹೋದ್ ನಗರಕ್ಕೆ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಮುಕೇಶ್ ಅಂಬಾನಿಗೆ 3ನೇ ಬಾರಿಗೆ ಕೊಲೆ ಬೆದರಿಕೆ – ಬೇಡಿಕೆ ಮೊತ್ತ 400 ಕೋಟಿಗೆ ಏರಿಕೆ
Advertisement
Advertisement
ಬಸ್ಸಿನಲ್ಲಿದ್ದ 50 ಜನ ಪೊಲೀಸರು ಪ್ರಯಾಣಿಸುತ್ತಿದ್ದರು. ಈ ಪೈಕಿ 38 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ 29 ಮಂದಿಯನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ. ಒಂಬತ್ತು ಮಂದಿ ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಡೋದರಾದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬೆಡ್ ಕೊರತೆ- ಪುತ್ರನನ್ನು ಕಳೆದುಕೊಂಡ ಬಿಜೆಪಿಯ ಮಾಜಿ ಸಂಸದ
Advertisement
Web Stories