ಮುಂಬೈ: ಕೆಲಸಕ್ಕಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಲಸೆ ಬಂದಿದ್ದ ಮಹಿಳೆಯೊಬ್ಬರು ಮಂಗಳವಾರ ಕಬ್ಬಿನ ಗದ್ದೆಯಲ್ಲಿಯೇ ತಮ್ಮ 17ನೇ ಮಗುವಿಗೆ ಜನ್ಮ ನೀಡಿ, ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಜಲ್ಗಾಂವ್ ಮೂಲದ ಲಂಕಾಬಾಯಿ(38) ಅವರು ಮಂಗಳವಾರ ತಮ್ಮ 17ನೇ ಮಗುವಿಗೆ ಜನ್ಮ ನೀಡಿದ್ದರು. ಆದರೆ ದುರಾದೃಷ್ಟವಶಾತ್ ಆರೋಗ್ಯ ಸಮಸ್ಯೆಯಿಂದ ಹುಟ್ಟಿದ ಬಳಿಕ ಆ ಹೆಣ್ಣು ಮಗು ಮೃತಪಟ್ಟಿದೆ. ಲಂಕಾಬಾಯಿ ಕುಟುಂಬ ಅಲೆಮಾರಿ ಸಮುದಾಯದವರಾಗಿದ್ದು, ಕೆಲಸ ಅರಸಿ ಆಕೆಯ ಕುಟುಂಬ ಕರ್ನಾಟಕಕ್ಕೆ ಬಂದಿತ್ತು. ಸದ್ಯ ಕರ್ನಾಟಕದಲ್ಲಿ ಕಬ್ಬಿನ ಕಟಾವಿನ ಸಮಯವಾಗಿದ್ದು, ಬೆಳಗಾವಿಯ ಕಬ್ಬಿನ ಗದ್ದೆಯೊಂದರಲ್ಲಿ ಮಹಿಳೆ ಹಾಗೂ ಆಕೆಯ ಕುಟುಂಬ ಕೆಲಸ ಮಾಡುತ್ತಿತ್ತು.
Advertisement
Advertisement
ಕೆಲಸ ಮಾಡುತ್ತಿದ್ದ ವೇಳೆಯೇ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ, ಮಹಿಳೆ ಕಬ್ಬಿನ ಗದ್ದೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹುಟ್ಟಿದ ಬಳಿಕ ಮಗು ಸಾವನ್ನಪ್ಪಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
Advertisement
ಸೆಪ್ಟೆಂಬರ್ ತಿಂಗಳಿನಲ್ಲಿ ಮಹಿಳೆ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಟ್ಟಿದ್ದರು. ಆಗ ಆಕೆ 20ನೇ ಬಾರಿಗೆ ಗರ್ಭ ಧರಿಸಿರುವ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ ದಾಖಲಿಸಿಕೊಂಡಿದ್ದರು. ಈಗಾಗಲೇ ಮಹಿಳೆಗೆ 11 ಮಕ್ಕಳಿದ್ದು, ಅದರಲ್ಲಿ 9 ಹೆಣ್ಣು ಮಕ್ಕಳಿದ್ದಾರೆ. ಮೂರು ಬಾರಿ ಗರ್ಭಪಾತವಾಗಿದೆ, 5 ಮಗು ಸಾವನ್ನಪ್ಪಿದೆ ಎಂದು ಆರೋಗ್ಯಾಧಿಕಾರಿ ಡಾ. ಪವಾರ್ ಮಾಹಿತಿ ನೀಡಿದ್ದಾರೆ.
Advertisement
ನ.21ರಂದು ಮಹಿಳೆಯ ಆರೋಗ್ಯ ವಿಚಾರಿಸಲು ಅಧಿಕಾರಿಗಳು ಆಕೆಯ ಮನೆಗೆ ಭೇಟಿ ನೀಡಿದ್ದರು. ಆದರೆ ಕುಟುಂಬ ಸಮೇತ ಮಹಿಳೆ ಕರ್ನಾಟಕಕ್ಕೆ ವಲಸೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.