Bengaluru City
380 ಪಾಸಿಟಿವ್, 5 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಬೆಂಗಳೂರು: ಇಂದು ಕರ್ನಾಟಕದಲ್ಲಿ 380 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 405 ಜನ ಡಿಸ್ಚಾರ್ಜ್ ಆಗಿದ್ದಾರೆ. 8 ಜನ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು ಗದಗ, ಕೊಡಗು, ಕೊಪ್ಪಳ, ರಾಮನಗರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,44,437ಕ್ಕೆ ಏರಿಕೆ ಆಗಿದೆ. ಈ ಪೈಕಿ 9,26,234 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,925 ಸಕ್ರಿಯ ಪ್ರಕರಣಗಳಿವೆ.
ಒಟ್ಟು ಇಲ್ಲಿಯವರೆಗೆ 12,259 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 137 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 3,573 ಆಂಟಿಜನ್ ಟೆಸ್ಟ್, 65,420 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 68,993 ಮಂದಿಗೆ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ 194 ಮಂದಿಗೆ ಸೋಂಕು ಬಂದಿದೆ. ದಕ್ಷಿಣ ಕನ್ನಡ 33, ಮೈಸೂರು 31 ತುಮಕೂರು 11, ಉಡುಪಿಯ 13 ಮಂದಿಗೆ ಸೋಂಕು ಬಂದಿದೆ. ಒಟ್ಟು 137 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 66, ಕಲಬುರಗಿ 13, ಹಾಸನ 6, ಮತ್ತು ಉಡುಪಿಯಲ್ಲಿ 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
