ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ ಹಾವಳಿ ದಿನೇದಿನೇ ಜಾಸ್ತಿ ಆಗ್ತಾ ಇದೆ. ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ ಬ್ಲ್ಯಾಕ್ ಫಂಗಸ್ ಕೇಸ್ ಏರಿಕೆಯಾಗ್ತಾ ಇದೆ. ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ 3,832ಕ್ಕೆ ಏರಿಕೆಯಾಗಿದ್ದು, 437 ಮಂದಿ ಸಾವನ್ನಪ್ಪಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಬ್ಲ್ಯಾಕ್ ಫಂಗಸ್ ಹಾವಳಿ ಜೋರಿದೆ. ಇಲ್ಲಿಯವರೆಗೂ ಬೆಂಗಳೂರಿನಲ್ಲಿ 1,206 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಜೊತೆಗೆ ಬ್ಲ್ಯಾಕ್ ಫಂಗಸ್ ಗೆ ಬೆಂಗಳೂರಿನಲ್ಲಿ 149 ಜನ ಸಾವನ್ನಪ್ಪಿದ್ದಾರೆ. ದಿನೇ ದಿನೇಕೇಸ್ ಏರಿಕೆಯಾಗ್ತಾ ಇದ್ದು, ಆತಂಕ ಹುಟ್ಟಿಸಿದೆ. ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರದಲ್ಲಿ ವ್ಯಾಕ್ಸಿನ್ ಸಮಸ್ಯೆ ಇಲ್ಲ: ಎಂಟಿಬಿ
Advertisement
Advertisement
ರಾಜ್ಯದ 30 ಜಿಲ್ಲೆಗಳಲ್ಲಿ ಅತಿ ಹೆಚ್ಚು ಬ್ಲ್ಯಾಕ್ ಫಂಗಸ್ ಇರುವುದು ಬೆಂಗಳೂರು ನಗರದಲ್ಲಿ. ಬೆಂಗಳೂರಿನಲ್ಲಿ ಇದುವರೆಗೂ 1206 ಕೇಸ್ ದಾಖಲಾಗಿದ್ದು, ವಿಕ್ಟೋರಿಯಾದಲ್ಲಿ 209, ಬೌರಿಂಗ್ ಆಸ್ಪತ್ರೆ 433, ಕೆಸಿ ಜನರಲ್ 07 ಹಾಗೂ ಇಂದಿರಾಗಾಂಧಿ 3 ಕೇಸ್ ಪತ್ತೆಯಾಗಿದೆ. ಇಷ್ಟು ಮಾತ್ರವಲ್ಲದೆ ಖಾಸಗಿ ಆಸ್ಪತ್ರೆಗಳಲ್ಲೂ ಕೇಸ್ ಏರಿಕೆಯಾಗ್ತಾನೆ ಇದೆ.