ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 388 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು 5 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 194 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 448 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 4 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 586 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,711 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,85,986 ಮಂದಿಗೆ ಕೊರೊನಾ ಬಂದಿದೆ. 29,39,239 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.28 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.32 ರಷ್ಟಿದೆ. ಇದನ್ನೂ ಓದಿ: ಕಾಳಿ ನದಿಯಲ್ಲಿ ಗಾಳಹಾಕಿ ಮೀನು ಹಿಡಿಯಲು ಹೋದ ಬಾಲಕನನ್ನು ಎಳೆದೊಯ್ದ ಮೊಸಳೆ
ಇಂದು ರಾಜ್ಯದಲ್ಲಿ ಇಂದು ಒಟ್ಟು 39,983 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,17,827 ಸ್ಯಾಂಪಲ್ (ಆರ್ಟಿ ಪಿಸಿಆರ್ 95,523 + 22,304 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮೆಡಿಕಲ್ನಲ್ಲಿ ಗ್ರೈಪ್ ವಾಟರ್ ಬದಲು ಪಾಯಿಸನ್ ಕೊಟ್ರು
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 194, ಬೀದರ್ 3, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 7, ಚಿತ್ರದುರ್ಗ 4, ದಕ್ಷಿಣ ಕನ್ನಡ 34, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 25, ಹಾವೇರಿ 0, ಕಲಬುರಗಿ 0, ಕೊಡಗು 6, ಕೋಲಾರ 5, ಕೊಪ್ಪಳ 0, ಮಂಡ್ಯ 5, ಮೈಸೂರು 23, ರಾಯಚೂರು 0, ರಾಮನಗರ 3, ಶಿವಮೊಗ್ಗ 12, ತುಮಕೂರು 37, ಉಡುಪಿ 4, ಉತ್ತರ ಕನ್ನಡ 10, ವಿಜಯಪುರ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.