ಬೆಂಗಳೂರು: ಇಂದು ಕರ್ನಾಟಕದಲ್ಲಿ 388 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 470 ಜನ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಕೊರೊನಾಗೆ ಬಲಿಯಾಗಿದ್ದಾರೆ.
Advertisement
ಇಂದು ಹಾವೇರಿ, ದಾವಣಗೆರೆ, ಧಾರವಾಡ, ಗದಗ, ಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,39,775ಕ್ಕೆ ಏರಿಕೆ ಆಗಿದೆ. ಈ ಪೈಕಿ 9,21,592 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5944 ಸಕ್ರಿಯ ಪ್ರಕರಣಗಳಿವೆ.
Advertisement
Advertisement
ಒಟ್ಟು ಇಲ್ಲಿಯವರೆಗೆ 12,220 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 145 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 2195 ಆಂಟಿಜನ್ ಟೆಸ್ಟ್, 51,121 ಆರ್ಟಿ ಪಿಸಿಆರ್ ಸೇರಿದಂತೆ ಒಟ್ಟು 53,316 ಮಂದಿಗೆ ಪರೀಕ್ಷೆ ಮಾಡಲಾಗಿದೆ.
Advertisement
ಎಂದಿನಂತೆ ಬೆಂಗಳೂರು ನಗರದಲ್ಲಿ 201 ಮಂದಿಗೆ ಸೋಂಕು ಬಂದಿದೆ. ಚಿಕ್ಕಬಳ್ಳಾಪುರ ಕೊಡಗು 27, ಮೈಸೂರು 13, ತುಮಕೂರು 27 ಮಂದಿಗೆ ಸೋಂಕು ಬಂದಿದೆ. ಒಟ್ಟು 145 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 68 ದಾರವಾಡ 5, ಗದಗ 4 ಮಂದಿ, ಉಡುಪಿಯಲ್ಲಿ 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.