ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೊಡೆ ತಟ್ಟಲು ನಿರ್ಧರಿಸಿರುವ ವಿರೋಧ ಪಕ್ಷಗಳ ಒಕ್ಕೂಟ INDIA ಗುರುವಾರದಿಂದ 2 ದಿನ ಮುಂಬೈನಲ್ಲಿ ತನ್ನ ಮೂರನೇ ಸಭೆ ನಡೆಸಲಿದೆ. ಸಭೆಯಲ್ಲಿ ಕಾಂಗ್ರೆಸ್ (Congress) ಸೇರಿ 26 ಪ್ರಾದೇಶಿಕ ಪಕ್ಷಗಳ ನಾಯಕರು ಭಾಗಿಯಾಗುತ್ತಿದ್ದು ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.
ಸಭೆಯಲ್ಲಿ INDIA ಒಕ್ಕೂಟಕ್ಕೆ ಸಾಮಾನ್ಯ ಧ್ವಜ ಮತ್ತು ಚಿಹ್ನೆಯನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿದೆ. ಬಿಡುಗಡೆ ವೇಳೆ ಯುಪಿಎ ಒಕ್ಕೂಟದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಉಪಸ್ಥಿತರಿದ್ದಾರೆ ಎನ್ನಲಾಗಿದೆ. ಅಶೋಕ ಚಕ್ರ ರಹಿತ ತ್ರಿವರ್ಣ ಧ್ವಜ ಬಹುತೇಕ ಒಕ್ಕೂಟದ ಧ್ವಜವಾಗಿರಲಿದ್ದು, ಚಿಹ್ನೆಯ ಬಗ್ಗೆ ಇನ್ನು ನಾಯಕರು ಸುಳಿವು ಬಿಟ್ಟುಕೊಟ್ಟಿಲ್ಲ.
Advertisement
Advertisement
ಈ ಸಭೆಯಲ್ಲಿ 2024ರ ಲೋಕಸಭೆ ಚುನಾವಣೆಗೆ ತಮ್ಮ ಏಕತೆಯನ್ನು ಪ್ರದರ್ಶಿಸುವ ಮೂಲಕ ಸಮನ್ವಯ ಸಮಿತಿ, ಪ್ರಾಯಶಃ ಅಧ್ಯಕ್ಷರು, ಸಂಚಾಲಕರು ಮತ್ತು ಇತರ ಪ್ಯಾನೆಲ್‌ಗಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ ಎನ್ನಲಾಗಿದೆ. ಸಭೆಯಲ್ಲಿ ‘ಬಿಜೆಪಿ ಚಲೇ ಜಾವೋ’ ಅಭಿಯಾನವನ್ನು ಅನಾವರಣಗೊಳಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ – ನುಡಿದಂತೆ ನಡೆದಿದ್ದೇವೆ, ಕರ್ನಾಟಕ ದಿವಾಳಿಯಾಗಿಲ್ಲ ಮೋದಿಯವರೇ: ಸಿಎಂ
Advertisement
Advertisement
ಈ ನಡುವೆ 2024ರ ಲೋಕಸಭಾ ಚುನಾವಣೆ ಸಂಬಂಧ ಇಂಡಿಯಾ ಮೈತ್ರಿ ಕೂಟ ರೂಪಿಸಬೇಕಾದ ರಣತಂತ್ರಗಳ ಕುರಿತಾಗಿ ಮುಂಬೈ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಸೀಟು ಹಂಚಿಕೆ ಸೇರಿದಂತೆ ಹಲವು ಅಜೆಂಡಾಗಳ ಕುರಿತಾಗಿ ಚರ್ಚೆ ನಡೆಸಬೇಕಿದೆ. ಈ ವೇಳೆ ಕೆಲವು ನೂತನ ಪಕ್ಷಗಳು ತಮ್ಮ ಮೈತ್ರಿ ಕೂಟ ಸೇರಲಿವೆ. ಸಾಧ್ಯವಾದಷ್ಟೂ ಹೆಚ್ಚಿನ ರಾಜಕೀಯ ಪಕ್ಷಗಳನ್ನು ಸೇರ್ಪಡೆ ಮಾಡಬೇಕೆಂಬ ಉದ್ದೇಶ ನನಗಿದೆ. ಆದರೆ ವೈಯಕ್ತಿಕವಾದ ಯಾವ ಬಯಕೆಗಳೂ ಇಲ್ಲ ಎಂದು ನಿತೀಶ್ ಕುಮಾರ್ ಹೇಳಿದರು. ಇದನ್ನೂ ಓದಿ: ನಾವು ಯಾವತ್ತೂ ನಿಮಗೆ ಸುಳ್ಳು ಹೇಳಲ್ಲ, ಸುಳ್ಳು ಆಶ್ವಾಸನೆ ಕೊಡಲ್ಲ: ರಾಹುಲ್ ಗಾಂಧಿ
Web Stories