ನವದೆಹಲಿ: ರಾಜ್ಯದ 3ನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ (Vande Bharat Express Train) ಸೆಪ್ಟೆಂಬರ್ 24ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಇಂದು (ಗುರುವಾರ) ಈ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.
ಹೈದರಾಬಾದ್ನ ಕಾಚಿಗುಡ – ಯಶವಂತಪುರ ನಿಲ್ದಾಣದ ನಡುವೆ ಸಂಚರಿಸುವ ರೈಲಿಗೆ ಸೆಪ್ಟೆಂಬರ್ 24ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದು ದಕ್ಷಿಣ ಭಾರತದ 2 ಐಟಿ ನಗರಗಳ ನಡುವಿನ ಮೊದಲ ವಂದೇ ಭಾರತ್ ರೈಲಾಗಲಿದೆ. ಇದನ್ನೂ ಓದಿ: ನೈರುತ್ಯ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ- ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್
Advertisement
Advertisement
ಇಂದು ರೈಲು ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2:45 ಕ್ಕೆ ಯಶವಂತಪುರದಿಂದ ಕಾಚಿಗುಡ ತೆರಳಲಿದೆ. ರೈಲು ಸುಮಾರು 610 ಕಿ.ಮೀ ಅಂತರವನ್ನು 7 ಗಂಟೆಯಲ್ಲಿ ಕ್ರಮಿಸಬಹುದು ಎಂದು ಬೆಂಗಳೂರು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಬಟ್ಟೆ ಅಂಗಡಿ ಹೆಸ್ರಲ್ಲಿ ವಂಚನೆ ಆರೋಪ- ಚೈತ್ರಾ ವಿಚಾರಣೆಗೆ ಒಪ್ಪಿಸುವಂತೆ ಕೋಟ ಪೊಲೀಸರ ಮನವಿ
Advertisement
Web Stories