ಬೆಂಗಳೂರು: ಬಿಡಿಎ ಎಂಜಿನಿಯರ್ ಗೌಡಯ್ಯ ಮನೆಮೇಲೆ ಬರೋಬ್ಬರಿ 20 ಗಂಟೆಗಳ ಕಾಲ ನಡೆದ ದಾಳಿ ಅಂತ್ಯವಾಗಿದೆ. ಮಧ್ಯರಾತ್ರಿ 1.30ರವರೆಗೆ ಪರಿಶೀಲನೆ ನಡೆಸಿ ಎಸಿಬಿ ಅಧಿಕಾರಿಗಳು ಹಿಂದಿರುಗಿದ್ದಾರೆ.
ದಾಳಿ ವೇಳೆ 10 ಕೆ.ಜಿ ಚಿನ್ನ, ಕೋಟಿ ಕೋಟಿ ನಗದು ಪತ್ತೆಯಾಗಿದೆ. ಅಲ್ಲದೇ 40 ಎಕರೆ ಜಮೀನು, ಡಾಂಬರು ಮಿಶ್ರಣ ಘಟಕ, ರೋಡ್ ರೋಲರ್, ಶಾಲಾ ಬಸ್‍ಗಳು, ಕಾರುಗಳು ಪತ್ತೆಯಾಗಿವೆ. ನಿನ್ನೆಯ ದಾಳಿಯಲ್ಲಿ ಸುಮಾರು 200 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಆದ್ರೆ ಗೌಡಯ್ಯನ ಬ್ಯಾಂಕ್ ಇನ್ವೆಸ್ಟ್ ಮೆಂಟ್‍ನ್ನು ಇನ್ನೂ ಪರಿಶೀಲನೆ ನಡೆಸಿಲ್ಲ. ಇದನ್ನೂ ಓದಿ: ಇಬ್ಬರು ಭ್ರಷ್ಟ ಅಧಿಕಾರಿಗಳ ಬಳಿಯಿದೆ ಕೋಟ್ಯಂತರ ಆಸ್ತಿ: ಯಾರ ಬಳಿ ಎಷ್ಟು ಆಸ್ತಿ?
Advertisement
Advertisement
ಇತ್ತ ಜಯನಗರದಲ್ಲಿರೋ ಅತ್ತೆಯ ಮನೆಯಲ್ಲಿ ಕೆಜಿಗಟ್ಟಲೇ ಚಿನ್ನ ಇಟ್ಟಿದ್ದು ದಾಳಿ ವೇಳೆ ಬಹಿರಂಗವಾಗಿದೆ. ಅತ್ತೆ ಮನೆಯಲ್ಲಿ ಗೌಡಯ್ಯ ದಂಪತಿ 80 ಬಳೆ, ವಜ್ರದ ಸರ ಒಟ್ಟು 4.5 ಕೆ.ಜಿ ಚಿನ್ನದ ಆಭರಣ ಬಚ್ಚಿಟ್ಟಿದ್ದರು. ಆದ್ರೆ ಇದು ಅತ್ತೆಗೇ ಗೊತ್ತಿರಲಿಲ್ಲವಂತೆ. ಎಸಿಬಿ ರೈಡ್ ಮಾಡಿ ಬಾಚಿಕೊಂಡ ಬಳಿಕ ಅತ್ತೆಗೆ ಚಿನ್ನ ಎಂದು ಗೊತ್ತಾಗಿರುವುದಾಗಿ ತಿಳಿದುಬಂದಿದೆ.
Advertisement
Advertisement
ಅತ್ತೆ ಮನೆಯಲ್ಲಿ ಗೌಡಯ್ಯ ದಂಪತಿ ಕೋಣೆಯೊಂದನ್ನ ಇಟ್ಟಿಕೊಂಡಿದ್ದರು. ಅತ್ತೆ ಮನೆಗೆ ಗೌಡಯ್ಯ ದಂಪತಿ ಹೋದಾಗಲೆಲ್ಲ ರೂಂಗೆ ಹೋಗಿ ಬಾಗಿಲು ಹಾಕಿಕೊಳ್ಳುತ್ತಿದ್ದರಂತೆ. ಮನೆಯಲ್ಲಿದ್ದ ಚಿನ್ನಾಭರಣ ಎಸಿಬಿ ಅಧಿಕಾರಿಗಳು ದಾಳಿ ವೇಳೆ ವಶಪಡಿಸಿಕೊಂಡಾಗ ಗೌಡಯ್ಯನ ಅತ್ತೆ ಕಕ್ಕಾಬಿಕ್ಕಿ ಆದರು. ಸದ್ಯ ಅತ್ತೆ ಮನೆಯಿಂದ 80 ಬಳೆ, 15 ಕ್ಯಾರೆಟ್ ವಜ್ರದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಟಿಆರ್ ಸ್ವಾಮಿಯ ಗಾರ್ಡನ್‍ನಲ್ಲಿ ಕಂತೆ ಕಂತೆ ನೋಟು- ಮನೆಯ ಸೋಫಾ, ಬಕೆಟ್‍ನಲ್ಲಿ ನೋಟು!
ಎಸಿಬಿ ಅಧಿಕಾರಿಗಳು ಇದುವರೆಗೂ ಎಂಜಿನಿಯರ್‍ಗಳ ಬ್ಯಾಂಕ್ ಠೇವಣಿಗಳನ್ನು ಪರಿಶೀಲಿಸಿಲ್ಲ. ಶನಿವಾರದಿಂದ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಲಾಗುತ್ತದೆ. ಗೌಡಯ್ಯ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲೂ ಭಾರೀ ಆಸ್ತಿ ಸಂಪಾದಿಸಿದ್ದಾರೆ. 40 ಎಕರೆ ಜಮೀನು, ಡಾಂಬರು ಮಿಶ್ರಣ ಘಟಕ, ರೋಡ್ ರೋಲರ್, ಶಾಲಾ ಬಸ್‍ಗಳು, ಕಾರುಗಳು ಪತ್ತೆಯಾಗಿವೆ. ಶುಕ್ರವಾರ ನಡೆದ ದಾಳಿಯಲ್ಲಿ ಸುಮಾರು 200 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv