ಬೆಂಗಳೂರು: ಸಂಜೆ ಆಟ ಆಡ್ತಿದ್ದ ನಾಲ್ವರು ಶಾಲಾ ಮಕ್ಕಳು ಇದ್ದಕ್ಕಿದ್ದಂತೆ ಕಾಣೆಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್‍ನ ಮಂಚನಹಳ್ಳಿಯಲ್ಲಿ ನಡೆದಿದೆ.
12 ವರ್ಷದ ಚಂದನ್, ವಿಕಾಸ್, ನಂದನ್ ಮತ್ತು 14 ವರ್ಷದ ಕಾರ್ತಿಕ್ ನಾಪತ್ತೆಯಾದ ಬಾಲಕರು. ಆನೇಕಲ್, ಅತ್ತಿಬೆಲೆ, ಬೆಂಗಳೂರು ಸೇರಿ ಎಲ್ಲೆಡೆ ಮಕ್ಕಳಿಗಾಗಿ ಹುಡುಕಾಟ ನಡೆಸಲಾಗ್ತಿದೆ.
ಸಂಜೆ 5 ಗಂಟೆವರೆಗೂ ಗ್ರಾಮದಲ್ಲೇ ಬಾಲಕರು ಆಟವಾಡುತ್ತಿದ್ದರು. ಇತ್ತೀಚೆಗೆ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಆತಂಕಗೊಂಡ ಪಾಲಕರು ಅತ್ತಿಬೆಲೆ ಪೊಲೀಸ್ ಠಾಣೆಗೆ ದೂರು ನಿಡಿದ್ದಾರೆ.
ಸದ್ಯ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಾಲಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.