ಚೆನ್ನೈ: ಭಾರೀ ಮಳೆಗೆ ಗೋಡೆ ಕುಸಿದು ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವೆರು ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
Advertisement
ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪೆನರ್ಂಪಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆ ಕುರಿತಂತೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೆನರ್ಂಪಟ್ಟು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇದೀಗ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಹೋರಾಟದಿಂದ ಮೃತಪಟ್ಟ ರೈತರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಿ: ಸಿದ್ದರಾಮಯ್ಯ
Advertisement
Advertisement
ಘಟನೆ ಕುರಿತಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಘಟನೆಯಲ್ಲಿ ಮರತಪಟ್ಟ 9 ಮಂದಿ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಆಂಧ್ರದ ಕಡಪಾದಲ್ಲಿ ಪ್ರವಾಹ – ಮೂವರು ಸಾವು, 30 ಮಂದಿ ನಾಪತ್ತೆ
Advertisement
ಕಳೆದೊಂದು ವಾರದಿಂದ ತಮಿಳುನಾಡಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡಿನ ಉತ್ತರ ಜಿಲ್ಲೆಗಳಲ್ಲಿ ಶುಕ್ರವಾರವೂ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲಾ – ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.