ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

Public TV
2 Min Read
School Building Collapses

ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು (School Building Collapses) ಕನಿಷ್ಠ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ (Rajasthan’s Jhalawar) ನಡೆದಿದೆ.

ಇಂದು (ಜು.25) ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಅಲ್ಲದೇ 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಸಹ ಅಧಿಕಾರಿಗಳೊಂದಿಗೆ ಕೈಜೋಡಿಸಿದ್ದಾರೆ. ಇದನ್ನೂ ಓದಿ: ರಸ್ತೆ ಕುಸಿದು ಉಕ್ಕಿ ಹರಿದ ನೀರು – ಮಾನವ ಸೇತುವೆ ನಿರ್ಮಿಸಿ 35 ಶಾಲಾ ಮಕ್ಕಳನ್ನು ರಸ್ತೆ ದಾಟಿಸಿದ ಗ್ರಾಮಸ್ಥರು

ಮೃತಪಟ್ಟ ಮಕ್ಕಳ ಶವಗಳನ್ನ ಹೊರತೆಗೆಯಲಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ (Hospital) ಸಾಗಿಸಲಾಗಿದ್ದು, ಅವಶೇಷಗಳ ಅಡಿ ಸಿಲುಕಿರುವ ಮಕ್ಕಳ ರಕ್ಷಣಾ ಕಾರ್ಯ ನಡೆಯುತ್ತಿದೆ. ಕ್ರೇನ್‌ಗಳ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ಇದನ್ನೂ ಓದಿ: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ – ಸದನದಲ್ಲಿ ಅನುಮೋದನೆ

ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್‌ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಸಿಎಂ ಸಂತಾಪ
ಇನ್ನೂ ದುರಂತದಲ್ಲಿ ಮೃತಪಟ್ಟ ಮಕ್ಕಳಿಗೆ ರಾಜಸ್ಥಾನ ಸಿಎಂ ಭಜನ್‌ಲಾಲ್‌ ಶರ್ಮಾ (Bhajanlal Sharma) ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಈ ಘಟನೆ ನಿಜಕ್ಕೂ ಹೃದಯವಿದ್ರಾವಕವಾದದ್ದು ಅಂತ ಕಂಬನಿ ಮಿಡಿದಿದ್ದಾರೆ. ಅಲ್ಲದೇ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Share This Article