ಮೈಸೂರು: ಕೇರಳದ (Kerala) ವೈನಾಡಿನಲ್ಲಿ ಭಾರೀ ಪ್ರಮಾಣದ ಮಳೆ (Rain) ಆಗುತ್ತಿದ್ದು, ಮೈಸೂರು (Mysuru) ಜಿಲ್ಲೆಯ ಕಬಿನಿ ಜಲಾಶಯ ಭರ್ತಿಯಾಗಿದೆ.
ಡ್ಯಾಮ್‌ನ ಸುರಕ್ಷತೆ ದೃಷ್ಟಿಯಿಂದ ನಾಲ್ಕು ಕ್ರೇಸ್ಟ್ ಗೇಟ್‌ಗಳನ್ನು ತೆರೆದು 25 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಜಲಾಶಯಕ್ಕೆ ಈಗ 30 ಸಾವಿರ ಕ್ಯೂಸೆಕ್ ಒಳ ಹರಿವಿದೆ. ಹೀಗಾಗಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಆ.1 ರಂದು ಕಬಿನಿಯಿಂದ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿತ್ತು. ಇದನ್ನೂ ಓದಿ: ಕಾವೇರಿ ಡ್ಯಾಂಗಳಿಗೆ ಜೀವಕಳೆ- ಕಬಿನಿಯಿಂದ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ರಿಲೀಸ್
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗ್ತಿದೆ. ಹೀಗಾಗಿ, ಕಾವೇರಿ ಕೊಳ್ಳದ ಜಲಾಶಯಗಳಾದ ಕಬಿನಿ, ಕೆಆರ್‌ಎಸ್, ಹಾರಂಗಿ, ಹೇಮಾವತಿಗೆ ನೀರು ಹರಿದು ಬರ್ತಿದೆ. ಕೇರಳದ ವಯನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕಿನಲ್ಲಿರುವ ಕಬಿನಿ ಸಂಪೂರ್ಣ ಭರ್ತಿಯಾಗಿದೆ.
ನದಿಗೆ ನೀರು ಹರಿಸಲಾಗಿರುವುದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 100 ಅಡಿಯತ್ತ KRS ನೀರಿನ ಮಟ್ಟ – ಎರಡೇ ದಿನದಲ್ಲಿ 5 ಅಡಿ ಏರಿಕೆ
