ನವದೆಹಲಿ: ದೇಶದಲ್ಲಿ ದಿನ ಕಳೆದಂತೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ನಡುವೆ ಸುಮಾರು 4 ಕೋಟಿಗೂ ಅಧಿಕ ಜನ ಕೋವಿಡ್ ಲಸಿಕೆಯ ಮೊದಲ ಡೋಸ್ ಕೂಡ ಪಡೆದುಕೊಂಡಿಲ್ಲ ಎಂಬ ಕಳವಳಕಾರಿ ವಿಚಾರ ಹೊರಬಿದ್ದಿದೆ.
Advertisement
ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವರ್, ಜುಲೈ 18ರ ವರೆಗೆ 178 ಕೋಟಿ (ಶೇ.97.34) ಡೋಸ್ ಲಸಿಕೆಯನ್ನು ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಉಚಿತವಾಗಿ ನೀಡಲಾಗಿದೆ. ಇದರೊಂದಿಗೆ ಜುಲೈ 18ರ ವರೆಗೆ 4 ಕೋಟಿ ಅರ್ಹ ಜನರು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಇಬ್ಬರು ಮಕ್ಕಳಲ್ಲಿ ಕಾಣಿಸಿಕೊಂಡ ಮಂಕಿಪಾಕ್ಸ್ – ಈವರೆಗೆ 2,500ಕ್ಕೂ ಹೆಚ್ಚು ಕೇಸ್ ದಾಖಲು
Advertisement
Advertisement
ಈಗಾಗಲೇ ದೇಶದಲ್ಲಿ ಸರ್ಕಾರದಿಂದ ಆರೋಗ್ಯ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. 18 ರಿಂದ 59 ವರ್ಷದವರೆಗಿನವರು ಖಾಸಗಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಇದನ್ನೂ ಓದಿ: ವರದಕ್ಷಿಣೆ ಕೊಡಲಿಲ್ಲವೆಂದು ಮದುವೆಯಾದ ಮರುದಿನವೇ ವಾಟ್ಸಾಪ್‌ನಲ್ಲೇ ತಲಾಖ್ ನೀಡಿ ಪರಾರಿಯಾದ
Advertisement
ದೇಶದಲ್ಲಿ ಆಚರಿಸುತ್ತಿರುವ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ 75 ದಿನಗಳ ಕಾಲ ಎಲ್ಲಾ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡಲು ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ.
ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಭಾರತದ ಒಟ್ಟು ಜನಸಂಖ್ಯೆಯ ಶೇ. 98 ಜನರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದು, ಉಳಿದಂತೆ ಶೇ.90 ಜನರು ಸಂಪೂರ್ಣ ಲಸಿಕೆ ಪಡೆದಿದ್ದಾರೆ.