ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ತೂಬಿನಕೆರೆ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಬಲಿಯಾಗಿದ್ದಾರೆ. ಟೋಲ್ ತಪ್ಪಿಸಲು ಕಾರನ್ನು ದಿಢೀರ್ ನಿಧಾನ ಮಾಡಿದ್ದರಿಂದ ಈ ಅಪಘಾತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಗಣಂಗೂರು ಟೋಲ್ ಹಿಂದೆಯೇ ಎಕ್ಸ್‌ಪ್ರೆಸ್ ವೇನಿಂದ ಎಕ್ಸಿಟ್ ಆಗಲು ಚಂದ್ರರಾಜೇ ಅರಸ್ ಅವರು ನೆಕ್ಸಾನ್ ಕಾರನ್ನು ಸ್ಲೋ ಮಾಡಿದ್ದಾರೆ. ಇದರಿಂದಾಗಿ ಹಿಂದಿನಿಂದ ವೇಗದಲ್ಲಿ ಬರುತ್ತಿದ್ದ ಐರಾವತ ಬಸ್ಸು ಗುದ್ದಿದೆ. ಟೋಲ್ ಸುಂಕ 180 ರೂ. ಉಳಿಸಲು ತೂಬಿನಕೆರೆ ಬಳಿ ಎಕ್ಸಿಟ್ ಆಗಲು ಕಾರು ಸ್ಲೋ ಮಾಡಿರಬಹುದು ಎಂಬ ಶಂಕೆ ಎದ್ದಿದೆ. ಇದನ್ನೂ ಓದಿ: ಯಡಿಯೂರಪ್ಪ ಕುಟುಂಬ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತಿ ಆಗೋವರೆಗೂ ನಾನು ಬಿಜೆಪಿಗೆ ವಾಪಸ್ ಆಗಲ್ಲ – ಯತ್ನಾಳ್ ಶಪಥ
- Advertisement
ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಐರಾವತ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಸತ್ಯಾನಂದ ರಾಜೇ ಆರಸ್ (51), ಅವರ ಪತ್ನಿ ನಿಶ್ಚಿತಾ (45), ಚಂದ್ರು (62), ಅವರ ಪತ್ನಿ ಸುವೇದಿನಿ ರಾಣಿ (50) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಗೃಹಪ್ರವೇಶ ಮುಗಿಸಿದ್ದ ಹೊಸ ಮನೆಗೆ ಕನ್ನ; ಯುಗಾದಿ ಹಬ್ಬಕ್ಕೆ ಸ್ವಗ್ರಾಮಕ್ಕೆ ಹೋಗಿದ್ದಾಗ ಮನೆಗಳವು
- Advertisement
ಮೃತರೆಲ್ಲರು ಬೆಂಗಳೂರು ಜೆಪಿ ನಗರದಲ್ಲಿ ನೆಲೆಸಿದ್ದರು. ಮಾವನ ಅಂತ್ಯಸಂಸ್ಕಾರಕ್ಕೆ ಮೈಸೂರಿನ ಪಿರಿಯಾಪಟ್ಟಣಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.