ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾರು ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಫುಟ್ಪಾತ್ ಮೇಲೆ ಸಂಚರಿಸಿದ್ದರಿಂದ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಕರೀಮ್ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತರು ಇದ್ದರು. ಅದರಲ್ಲಿ ಒಬ್ಬಾತ ಕಾರು ಡ್ರೈವ್ ಮಾಡುತ್ತಿದ್ದ. ಈ ಬಾಲಕರೆಲ್ಲರೂ 9ನೇ ತರಗತಿಯಲ್ಲಿ ಓದುತ್ತಿದ್ದಾರೆ.
Advertisement
Advertisement
ಕರೀಮ್ನಗರದ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಇದರಿಂದಾಗಿ ಬಾಲಕನಿಗೆ ಸರಿಯಾಗಿ ದಾರಿ ಕಾಣುತ್ತಿರಲಿಲ್ಲ. ಈ ಮಧ್ಯೆ ಬಾಲಕ ತನ್ನ ಕಣ್ಣನ್ನು ಉಜ್ಜಿಕೊಳ್ಳಲು ಸ್ಟೀರಿಂಗ್ನಿಂದ ಕೈ ತೆಗೆದಾದ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದನ್ನೂ ಓದಿ: ಅಕ್ರಮ ಆಸ್ತಿ ಖರೀದಿಸಿಲ್ಲ – 3 ಕೋಟಿ ಮಾನನಷ್ಟ ಕೇಸ್ ಹಾಕ್ತೀನಿ ಎಂದ ಚನ್ನಣ್ಣನವರ್
Advertisement
ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು, ಅಲ್ಲೆ ಫುಟ್ಪಾತ್ನಲ್ಲಿ ಕುಳಿತಿದ್ದ ಮಹಿಳೆಯರ ಮೇಲೆ ಕಾರು ಹರಿದಿದೆ. ಘಟನೆಯಿಂದ 14 ವರ್ಷದ ಹುಡುಗಿ ಸೇರಿ 27-32 ವರ್ಷದೊಳಗಿನ ನಾಲ್ವರು ಮೃತಪಟ್ಟಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಟೆರೇಸ್ನಿಂದ ಜಿಗಿದು ಮಾಡೆಲ್ ಆತ್ಮಹತ್ಯೆಗೆ ಯತ್ನ
Advertisement
ಘಟನೆಯಲ್ಲಿ ಡ್ರೈವಿಂಗ್ಗೆ ಕುಳಿತಿದ್ದ ಬಾಲಕ ಸ್ಟೀರಿಂಗ್ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಲ್ಲದೆ, ಬ್ರೇಕ್ ಬದಲಿಗೆ ಆಕ್ಸಿಲೇಟರ್ ಪ್ರೆಸ್ ಮಾಡಿದ್ದು, ದೊಡ್ಡ ಎಡವಟ್ಟಿಗೆ ಕಾರಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಕಾರಿನಲ್ಲಿದ್ದ ಮೂವರು ಅಪ್ರಾಪ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲ, ಕಾರು ಡ್ರೈವ್ ಮಾಡುತ್ತಿದ್ದ ಬಾಲಕನ ತಂದೆ ವಿರುದ್ಧವೂ ಕೇಸ್ ದಾಖಲಾಗಿದೆ.