ಮುಂಬೈ: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಲಾರಿ ಹೊತ್ತಿ ಉರಿದು ನಾಲ್ವರು ಮೃತಪಟ್ಟ ಘಟನೆ ಪುಣೆ- ಮುಂಬೈ ಎಕ್ಸ್ ಪ್ರೆಸ್ ವೇ (Pune- Mumbai Expressway) ನಲ್ಲಿ ನಡೆದಿದೆ.
ಈ ದುರ್ಘಟನೆ ಇಂದು (ಮಂಗಳವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಲೋನಾವಾಲಾ-ಖಂಡಾಲಾ ಮಾರ್ಗದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
Advertisement
ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಲಾರಿ ಪಲ್ಟಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು ಉರಿದಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿ ಬ್ರಿಡ್ಜ್ ಕೆಳಗೆ ಸಂಚರಿಸುತ್ತಿದ್ದವರ ಮೇಲೂ ಪರಿಣಾಮ ಬೀರಿದೆ.
Advertisement
ಸೇತುವೆಯ ಕೆಳಭಾಗದಲ್ಲಿ ಪ್ರಯಾಣಿಸುತ್ತಿದ್ದ ಬೈಕ್ ಸವಾರರಿಗೆ ಬೆಂಕಿ ತಗುಲಿದ್ದು, ಈ ಪೈಕಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: 1 ಷೇರಿನ ಬೆಲೆ 1 ಲಕ್ಷ – ಭಾರತದಲ್ಲಿ ದಾಖಲೆ ಬರೆದ ಎಂಆರ್ಎಫ್: ಯಾವ ವರ್ಷ ಎಷ್ಟಿತ್ತು?
Advertisement