ಲಕ್ನೋ: ಉತ್ತರ ಪ್ರದೇಶದ (Uttar Pradesh) ಗೋಂಡಾ ಜಿಲ್ಲೆಯಲ್ಲಿ ನಡೆದಿರುವ ಭೀಕರ ರೈಲು ದುರಂತವು ಒಡಿಶಾದ ಬಾಲಸೋರ್, ಪಶ್ಚಿಮ ಬಂಗಾಳದ ದಾರ್ಜಿಲಿಂಗ್ ನಲ್ಲಿ ನಡೆದ ಭೀಕರ ರೈಲು ಅಪಘಾತವನ್ನೇ ನೆನಪಿಸಿದೆ. ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ (Chandigarh-Dibrugarh Express Train) ಹಲವು ಕೋಚ್‌ಗಳು ಹಳಿ ತಪ್ಪಿದ್ದರಿಂದ ರೈಲು ಅಪಘಾತಕ್ಕೀಡಾಗಿದ್ದು, ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಗೋಂಡಾದಲ್ಲಿ ನಡೆದಿದೆ.
Advertisement
ಬುಧವಾರ ರಾತ್ರಿ 11.35ಕ್ಕೆ ಚಂಡೀಗಢ ನಿಲ್ದಾಣದಿಂದ (Chandigarh Railway Station) ಹೊರಟಿದ್ದ ರೈಲು (ರೈಲು ಸಂಖ್ಯೆ 15904) ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು. ಮಾರ್ಗಮಧ್ಯೆ ಹಲವು ಕೋಚ್‌ಗಳು ಹಳಿ ತಪ್ಪಿದ ಪರಿಣಾಮ ದುರಂತರ ಸಂಭವಿಸಿದೆ. ಗೋಂಡಾ ಮತ್ತು ಜಿಲಾಹಿ ನಡುವಿನ ಪಿಕೌರಾ ಪ್ರದೇಶದಲ್ಲಿ ಅಪಘಾತ (Train Accident) ಸಂಭವಿಸಿದ್ದು, ನಾಲ್ವರು ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ
Advertisement
‼️HCM Dr @himantabiswa has been briefed about the derailment of Dibrugarh – Chandigarh express in Uttar Pradesh.
HCM is monitoring the situation and the Government of Assam is in touch with relevant authorities.
— Chief Minister Assam (@CMOfficeAssam) July 18, 2024
Advertisement
15 ಅಂಬುಲೆನ್ಸ್, 40 ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಹಾಜರ್:
ಘಟನೆ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿವೆ. ಅಲ್ಲದೇ 15 ಅಂಬುಲೆನ್ಸ್‌ಗಳೊಂದಿಗೆ 40 ಸದಸ್ಯರ ವೈದ್ಯಕೀಯ ತಂಡ ಸ್ಥಳಕ್ಕೆ ಬಂದಿದ್ದು, ಪ್ರಯಾಣಿಕರ ರಕ್ಷಣೆಗೆ ಮುಂದಾಗಿದ್ದಾರೆ. ಹೆಚ್ಚುವರಿ ಅಂಬುಲೆನ್ಸ್‌ಗಳನ್ನು ಸ್ಥಳಕ್ಕೆ ನಿಯೋಜನೆ ಮಾಡುವಂತೆ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಗ್ನಿವೀರರಿಗೆ 10% ಮೀಸಲಾತಿ – ಸ್ವಂತ ಉದ್ಯಮ ಆರಂಭಿಸುವವರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಘೋಷಣೆ
Advertisement
ಸ್ಥಳಕ್ಕೆ ಸಿಎಂ ಭೇಟಿ:
ಘಟನೆ ಸಂಭವಿಸಿದ ಕೂಡಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸ್ಥಳಕ್ಕಾಗಮಿಸಿದ್ದಾರೆ. ಜೊತೆಗೆ ಪರಿಹಾರ ಕ್ರಮಗಳನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಸಿಎಂ ಭೇಟಿ ಬೆನ್ನಲ್ಲೇ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕಾಗಮಿಸಿ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಭೂಕುಸಿತ ದುರಂತ – ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಹೆಚ್‌ಡಿಕೆ
ರೈಲು ಅಪಘಾತ ಸಂಭವಿಸಿದ ಕಾರಣ ಇದೇ ಮಾರ್ಗವಾಗಿ ತೆರಳಬೇಕಿದ್ದ 2 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ, 11 ರೈಲುಗಳಿಗೆ ಮಾರ್ಗಬದಲಾವಣೆಗೆ ಸೂಚಿಸಲಾಗಿದೆ. ಜೊತೆಗೆ ಪ್ರಯಾಣಿಕರಿಗಾಗಿ ಸಹಾಯವಾಣಿ ಸಹ ಸ್ಥಾಪಿಸಲಾಗಿದೆ. ಇದನ್ನೂ ಓದಿ: ಪಕ್ಷದಲ್ಲಿರುವ ಅಲ್ಪಸಂಖ್ಯಾತ ವಿಭಾಗವನ್ನು ವಿಸರ್ಜಿಸಬೇಕು – ಬಿಜೆಪಿ ನಾಯಕ ಸುವೆಂದು ಅಧಿಕಾರಿ