ನವದೆಹಲಿ: 56 ವರ್ಷಗಳ ಹಿಂದೆ ಸಂಭವಿಸಿದ್ದ ವಿಮಾನ ಅಪಘಾತವೊಂದರಲ್ಲಿ (Plane Crash) ನಾಪತ್ತೆಯಾಗಿದ್ದ ಮೃತದೇಹಗಳಲ್ಲಿ ನಾಲ್ಕು ಮೃತ ದೇಹಗಳು ಪತ್ತೆಯಾಗಿದೆ.
ಇದೀಗ ಹಿಮಭರಿತ ಭೂಪ್ರದೇಶದಲ್ಲಿ ಹುದುಗಿಹೋಗಿದ್ದ ವಿಮಾನದ ಅವಶೇಷಗಳು ದೊರೆತಿದ್ದು, ಪತ್ತೆಯಾದ ಮೃತ ದೇಹಗಳಲ್ಲಿ ಮೂವರ ಗುರುತನ್ನು ಪತ್ತೆ ಹಚ್ಚಲಾಗಿದ್ದು, ಸೇನೆಯ ವಿವಿಧ ವಲಯದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಸೈನಿಕರು ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಪ್ರಜ್ವಲ್ ಪ್ರಕರಣಕ್ಕೆ ಭವಾನಿಯನ್ನು ಎಳೆ ತಂದಾಗ ಸರಿ ಅನ್ನಿಸಿತ್ತಾ: ಕಾಂಗ್ರೆಸ್‌ಗೆ ಟೀಕೆಗೆ ಅಶೋಕ್ ಪ್ರಶ್ನೆ
Advertisement
Advertisement
ನಾಲ್ಕು ಶವಗಳ ಪೈಕಿ ಮೂರು ಮೃತದೇಹಗಳು ಮಲ್ಖಾನ್ ಸಿಂಗ್, ಸಿಪಾಯಿ ನಾರಾಯಣ್ ಸಿಂಗ್ ಮತ್ತು ಕುಶಲಕರ್ಮಿ ಥಾಮಸ್ ಚರಣ್ ಅವರದ್ದಾಗಿದೆ ಹಾಗೂ ಉಳಿದೊಂದು ಮೃತ ದೇಹದಿಂದ ವಶಪಡಿಸಿಕೊಂಡ ದಾಖಲೆಗಳು ವ್ಯಕ್ತಿಯನ್ನು ನಿರ್ಣಾಯಕವಾಗಿ ಗುರುತಿಸಿಲ್ಲ. ಆದರೆ, ಅವರ ಸಂಬಂಧಿಕರ ವಿವರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಈ ಕುರಿತು ಸೇನಾ ಅಧಿಕಾರಿಗಳು ಮಾತನಾಡಿ, ಭಾರತೀಯ ಸೇನೆಯ ಡೋಗ್ರಾ ಸ್ಕೌಟ್ಸ್ ಮತ್ತು ತಿರಂಗಾ ಮೌಂಟೇನ್ ರೆಸ್ಕ್ಯೂ ಸಿಬ್ಬಂದಿಯನ್ನು ಒಳಗೊಂಡ ಜಂಟಿ ತಂಡವು ಕಾರ್ಯಾಚರಣೆಯನ್ನು ನಡೆಸಿದೆ. ಇದರಲ್ಲಿ 4 ಶವಗಳನ್ನು ಪತ್ತೆ ಮಾಡಿದೆ. ಸಿಬ್ಬಂದಿಗಳಿಂದ ನಡೆಸಲಾದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ತಿಳಿಸಿದ್ದಾರೆ.
Advertisement
ಏನಿದರ ಹಿನ್ನೆಲೆ:
1968ರಲ್ಲಿ 56 ವರ್ಷಗಳ ಹಿಂದೆ ಭಾರತೀಯ ವಾಯುಪಡೆಯ A-12 ಎಂಬ ವಿಮಾನವು ಹಿಮಾಚಲ ಪ್ರದೇಶದ ರೋಹ್ಟಾಂಗ್ ಪಾಸ್‌ನಲ್ಲಿ (Rohtang Pass) ಅಪಘಾತಕ್ಕೀಡಾಗಿತ್ತು. ಫೆಬ್ರವರಿ 7, 1968 ರಂದು 102 ಜನರನ್ನು ಹೊತ್ತಿದ್ದ ಅವಳಿ-ಎಂಜಿನ್ ಟರ್ಬೊಪ್ರಾಪ್ ಸಾರಿಗೆ ವಿಮಾನವು ಚಂಡೀಗಢದಿಂದ ಲೇಹ್‌ಗೆ ಹಾರುತ್ತಿದ್ದಾಗ ನಾಪತ್ತೆಯಾಗಿತ್ತು.
ಅಪಘಾತಕ್ಕೀಡಾದ ವಿಮಾನದಲ್ಲಿ ಈ ಹಿಂದೆ 2003ರಲ್ಲಿ ಮೊದಲ ಬಾರಿಗೆ ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್‌ನ (Atal Bihari Vajpayee Institute of Mountaineering) ಪರ್ವತಾರೋಹಿಗಳು ಅವಶೇಷಗಳನ್ನು ಪತ್ತೆಹಚ್ಚಲಾಗಿತ್ತು. ಅದಾದ ಬಳಿಕ 2005, 2006, 2013, ಮತ್ತು 2019ರಲ್ಲಿ ಡೋಗ್ರಾ ಸ್ಕೌಟ್ಸ್ (Dogra Scouts) ವಿವಿಧ ಕಾರ್ಯಾಚರಣೆಗಳನ್ನು ನಡೆಸಿತ್ತು.
2019ರಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಐದು ಮೃತ ದೇಹಗಳನ್ನು ಹೊರ ತೆಗೆಯಲಾಗಿತ್ತು. ಇದೀಗ ಚಂದ್ರಭಾಗ ಮೌಂಟೇನ್ ಎಕ್ಸ್ಪೆಡಿಶನ್ (Chandra Bhaga Mountain Expedition) ಇನ್ನೂ ನಾಲ್ಕು ದೇಹಗಳನ್ನು ವಶಪಡಿಸಿಕೊಂಡಿದೆ. ಇದು ಭಾರತದ ದೀರ್ಘಾವಧಿಯ ಶೋಧ ಕಾರ್ಯಾಚರಣೆಯಲ್ಲಿ ಗಮನಾರ್ಹ ಯಶಸ್ಸನ್ನು ತಂದಿದೆ.ಇದನ್ನೂ ಓದಿ: ಮುಡಾ ಸೈಟ್ ವಾಪಸ್ ನೀಡಿರುವುದು ಒಳ್ಳೆಯ ನಿರ್ಧಾರ – ಪರಮೇಶ್ವರ್